Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:16 - ಕನ್ನಡ ಸತ್ಯವೇದವು C.L. Bible (BSI)

16 “ಅಯ್ಯೋ ! ಅಯ್ಯೋ ! ಮಹಾನಗರಿ ನಿನಗೆಂಥಾ ದುರ್ಗತಿ ! ಕೆನ್ನೀಲಿಯ ಕಡುಗೆಂಪಿನ ನಯವಸ್ತ್ರಗಳನುಟ್ಟವಳೇ, ಹೊನ್ನ ತೊಟ್ಟವಳೇ, ಮತ್ತು ರತ್ನಾಭರಣಗಳನು ಧರಿಸಿದವಳೇ, ತಾಸೊಂದರಲೇ ನಿನ್ನ ಐಸಿರಿಯೆಲ್ಲಾ ವ್ಯರ್ಥವಾಯಿತೇ!” ಎಂದು ದುಃಖಿಸಿ ಅತ್ತು ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಯ್ಯೋ, ಅಯ್ಯೋ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ರತ್ನ ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾ ಪಟ್ಟಣಕ್ಕೆ ಏನು ದುರ್ಗತಿ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವರು ದುಃಖದಿಂದ ಗೋಳಾಡುತ್ತಾ ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ! ಅವಳು ನಯವಾದ ನಾರುಮಡಿಯನ್ನು, ಧೂಮ್ರವರ್ಣದ ಉಡುಪನ್ನು ಮತ್ತು ರಕ್ತಾಂಬರಗಳನ್ನು ಧರಿಸಿದ್ದಳು. ಅವಳು ಚಿನ್ನ, ರತ್ನ, ಮುತ್ತುಗಳಿಂದ ಶೋಭಿಸುತ್ತಿದ್ದಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ಅಯ್ಯೋ! ಅಯ್ಯೋ! ಶೋಕಭರಿತ ಮಹಾನಗರಿಯೇ, ನೀನು ನೇರಳೆ, ಕಡುಗೆಂಪು ನಾರುಮಡಿಯನ್ನು ಧರಿಸಿ, ಚಿನ್ನ, ಬೆಲೆಬಾಳುವ ಕಲ್ಲು ಮತ್ತು ಮುತ್ತುಗಳಿಂದ ಬೆಳಗುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ,“ಕಸ್ಲಿ ಹಿ ಗತ್! ಕವ್ಡೊ ಮೊಟೊ ಹ್ಯೊ ಕಸ್ಟ್ ಹ್ಯಾ ಮೊಟ್ಯಾ ಶಾರಾಚೊ! ತಿ ಮ್ಹೊವ್ಲೆ ಕಿಮ್ತಿಚೆ, ಜಾಂಬ್ಳೆ, ತಾಂಬ್ಡೆ ಗುಂಜ್ಲೆ ಕಪ್ಡೆ ನೆಶಿ, ಅನಿ ಸೊನ್ಯಾಚ್ಯಾ, ಕಿಮ್ತಿಚ್ಯಾ ಗುಂಡ್ಯಾಂಚ್ಯಾ, ಅನಿ ಮೊತಿಯಾಂಚ್ಯಾ ವಸ್ತಾನಿ ಶಿಂಗಾರ್ ಕರುನ್ ಘೆಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:16
8 ತಿಳಿವುಗಳ ಹೋಲಿಕೆ  

ಆ ಸ್ತ್ರೀ ಕೆನ್ನೀಲಿಯ ಹಾಗೂ ಕಡುಗೆಂಪಾದ ಬಟ್ಟೆಯನ್ನು ಧರಿಸಿದ್ದಳು; ಚಿನ್ನ, ಮುತ್ತು, ರತ್ನಾಭರಣಗಳಿಂದ ಅಲಂಕೃತಳಾಗಿದ್ದಳು. ಕೈಯಲ್ಲಿ ಚಿನ್ನದ ಪಾತ್ರೆಯನ್ನೂ ಹಿಡಿದಿದ್ದಳು. ಅವಳ ಹಾದರದ ಅಸಹ್ಯಗಳಿಂದಲೂ ಕಳಂಕಗಳಿಂದಲೂ ಅದು ತುಂಬಿತ್ತು.


ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.


ರೆಕ್ಕೆ ತೆರೆದು ನೆರಳು ನೀಡುವ ಕೆರೂಬಿ ನೀನಾಗಿದ್ದೆ ದೇವರ ಪರಿಶುದ್ಧ ಮರೆಯಲ್ಲಿ ನಿನ್ನ ನಾ ನೆಲೆಗೊಳಿಸಿದ್ದೆ. ಕೆಂಡದ ಮಡುಮಧ್ಯೆ ನೀ ವಿಹಾರಮಾಡುತ್ತಿದ್ದೆ.


ಸೂರೆ ಮಾಡಿರಿ ಅದರ ಬೆಳ್ಳಿಯನು, ಕೊಳ್ಳೆಹೊಡೆಯಿರಿ ಬಂಗಾರವನು. ಮಿತಿಯಿಲ್ಲ ಅದರ ಧನಕನಕಕೆ, ಎಲ್ಲೆಯಿಲ್ಲ ಅದರ ಅಮೂಲ್ಯ ಆಸ್ತಿಪಾಸ್ತಿಗೆ.


ನಾನು ದೇವರಾತ್ಮ ವಶನಾದೆ. ಆಗ ದೇವದೂತನು ನನ್ನನ್ನು ಅಡವಿಗೆ ಕೊಂಡೊಯ್ದನು. ಅಲ್ಲಿ, ಒಂದು ಕಡುಗೆಂಪಾದ ಮೃಗದ ಮೇಲೆ ಕುಳಿತಿದ್ದ ಸ್ತ್ರೀಯೊಬ್ಬಳನ್ನು ಕಂಡೆ. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಮಾತುಗಳೇ ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.


ಅವರು ಅವಳನ್ನು ದಹಿಸಿದ ಬೆಂಕಿಯ ದಟ್ಟ ಹೊಗೆಯನ್ನು ಕಂಡು, “ಈ ಮಹಾನಗರಿಗೆ ಸರಿಸಮನಾದ ನಗರವೊಂದುಂಟೇ?” ಎಂದು ಉದ್ಗರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು