Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:17 - ಕನ್ನಡ ಸತ್ಯವೇದವು C.L. Bible (BSI)

17 ಆಗ ಹಡಗುಗಳ ಮಾಲೀಕರೆಲ್ಲರೂ ಸಮುದ್ರದ ಪ್ರಯಾಣಿಕರೂ ನಾವಿಕರೂ ಸಮುದ್ರದ ದುಡಿಮೆಗಾರರೂ ದೂರದಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಹಂಬಲಿಸುವರು. ಇದಲ್ಲದೆ ಹಡಗುಗಳ ಯಜಮಾನರೂ ಸಮುದ್ರಪ್ರಯಾಣ ಮಾಡುವವರೂ ನಾವಿಕರೂ ಸಮುದ್ರದ ಮೇಲೆ ಕೆಲಸವನ್ನು ನಡಿಸಿ ಜೀವನ ಮಾಡುವವರೆಲ್ಲರೂ ದೂರದಲ್ಲಿ ನಿಂತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಶ್ರೀಮಂತಿಕೆಯೆಲ್ಲವೂ ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ!’ “ಹಡಗುಗಳ ಒಡೆಯರೂ ಹಡಗುಗಳಲ್ಲಿ ಸಂಚರಿಸುವ ಜನರೆಲ್ಲರೂ ನಾವಿಕರೂ ಸಮುದ್ರದಿಂದ ಹಣವನ್ನು ಗಳಿಸುವ ಜನರೆಲ್ಲರೂ ದೂರದಲ್ಲಿ ನಿಂತುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಒಂದೇ ತಾಸಿನಲ್ಲಿ ಅಂಥ ಮಹಾ ಐಶ್ವರ್ಯವು ನಾಶವಾಗಿ ಹೋಯಿತಲ್ಲಾ?’ ” ಎಂದು ಗೋಳಾಡುವರು. “ಪ್ರತಿಯೊಂದು ಹಡಗಿನ ಮಾಲೀಕರು ಮತ್ತು ಹಡಗು ಪಯಣಿಗರು, ನಾವಿಕರು ಮತ್ತು ಸಮುದ್ರದಿಂದ ತಮ್ಮ ಜೀವನೋಪಾಯ ಮಾಡುವವರೆಲ್ಲರೂ ದೂರದಲ್ಲಿ ನಿಂತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅನಿ ಎಕುಚ್ ಎಕ್ ತಾಸಾತ್ ತಿಚಿ ಹಿ ಸಗ್ಳಿ ಅಸ್ತಿ ಕಳ್ದುನ್ ಘೆಟ್ಲಿನ್!” ಮನ್ತ್ಯಾತ್. ಸಗ್ಳ್ಯಾ ಮೊಟ್ಯಾ ಮೊಟ್ಯಾ ಢೊನಿಯಾ ಚಾಲ್ವುತಲ್ಯಾಂಚಿ ಮುಖಂಡಾ, ಅನಿ ತ್ಯಾತುರ್ನ್ನಾ ಫಿರುನ್ ಖೆಳ್ತಲಿ ಲೊಕಾ, ಢೊನ್ ಚಾಲ್ವುತಲೆ ಲೊಕಾ, ಅನಿ ಸಮುಂದರಾಚ್ಯಾ ವೈನಾ ಜಿವನ್ ಕರ್ತಲಿ ಸಗ್ಳಿ ಲೊಕಾ, ಧುರುಚ್ ಇಬೆ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:17
11 ತಿಳಿವುಗಳ ಹೋಲಿಕೆ  

ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.


‘ಗೋಳಾಡಿರಿ, ತಾರ್ಷೀಷಿನ ನಾವಿಕರೆಲ್ಲರು; ಹಾಳಾಗಿವೆ ನಿಮ್ಮ ಬಂದರುಗಳೆಲ್ಲವು.’


ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.


ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.


ಬಾಬಿಲೋನ್ ತಟ್ಟನೆ ಬಿದ್ದು ಹಾಳಾಯಿತು. ಅದಕ್ಕಾಗಿ ಗೋಳಾಡಿ. ಅದರ ನೋವನ್ನು ನೀಗಿಸಲು ಔಷಧವನ್ನು ತನ್ನಿ. ಒಂದು ವೇಳೆ ಅದು ಗುಣವಾದೀತು!


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ಒಂದೇ ದಿನದೊಳಗೆ, ಒಂದೇ ಕ್ಷಣದೊಳಗೆ ಪುತ್ರಶೋಕ, ವೈಧವ್ಯ - ಇವೆರಡು ಒದಗುವುವು ನಿನಗೆ. ಎಷ್ಟೇ ಮಂತ್ರತಂತ್ರಗಳನು ನಡೆಸಿದರೂ ಅನುಭವಿಸುವೆ ನೀ ಪೂರ್ತಿಯಾಗಿ ಇವುಗಳನು.


ಆದರೆ ಶತಾಧಿಪತಿ ಪೌಲನನ್ನು ನಂಬದೆ, ನೌಕೆಯ ನಾಯಕನ ಹಾಗೂ ಅದರ ಯಜಮಾನನ ಮಾತುಗಳಿಗೆ ಕಿವಿಗೊಟ್ಟನು.


“ನೀನು ಕಂಡ ಹತ್ತು ಕೊಂಬುಗಳು ಹತ್ತು ರಾಜರುಗಳನ್ನು ಸೂಚಿಸುತ್ತವೆ. ಅವರು ಇನ್ನೂ ರಾಜ್ಯಭಾರವನ್ನು ವಹಿಸಿಕೊಂಡಿಲ್ಲ. ಆ ಮೃಗದ ಜೊತೆಯಲ್ಲಿ ರಾಜ್ಯವಾಳಲು ಒಂದು ಗಂಟೆಯವರೆಗೆ ಅವರಿಗೆ ಅಧಿಕಾರವನ್ನು ಕೊಡಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು