Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:18 - ಕನ್ನಡ ಸತ್ಯವೇದವು C.L. Bible (BSI)

18 ಅವರು ಅವಳನ್ನು ದಹಿಸಿದ ಬೆಂಕಿಯ ದಟ್ಟ ಹೊಗೆಯನ್ನು ಕಂಡು, “ಈ ಮಹಾನಗರಿಗೆ ಸರಿಸಮನಾದ ನಗರವೊಂದುಂಟೇ?” ಎಂದು ಉದ್ಗರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವಳ ದಹನದ ಹೊಗೆಯನ್ನು ನೋಡಿ ‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾ - ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವದು ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಾಬಿಲೋನಿನ ದಹನದಿಂದೇರುತ್ತಿದ್ದ ಹೊಗೆಯನ್ನು ನೋಡಿ ಅವರು ಗಟ್ಟಿಯಾದ ಧ್ವನಿಯಲ್ಲಿ, ‘ಈ ಮಹಾನಗರಿಯಂತಹ ನಗರವು ಇರಲೇ ಇಲ್ಲ!’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಕೆಯ ದಹನದ ಹೊಗೆಯನ್ನು ನೋಡಿ, ‘ಈ ಮಹಾಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಕೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅನಿ ತಿಕಾ ಜಾಳ್ವುತಲ್ಯಾ ಆಗಿತ್ನಾ ಯೆತಲ್ಯಾ ಡುಕ್ಟಾಕ್ ಬಗುಕ್ ತೆನಿ ರಡುನ್ಗೆತ್, “ಹ್ಯಾ ಶಾರಾ ಎವ್ಡೆ ಮೊಟೆ ಶಾರ್ ಅನಿ ಖಲೆಬಿ ನಾ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:18
8 ತಿಳಿವುಗಳ ಹೋಲಿಕೆ  

ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು.


ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು.


ಅಂಥವರ ನರಳಾಟದ ಹೊಗೆ ಸತತ ಮೇಲೇರುತ್ತಿರುತ್ತದೆ. ಮೃಗಕ್ಕೂ ಅದರ ವಿಗ್ರಹಕ್ಕೂ ಪೂಜೆಸಲ್ಲಿಸುವವರು ಮತ್ತು ಅದರ ಹೆಸರನ್ನು ಸೂಚಿಸುವ ಹಚ್ಚೆಯನ್ನು ಚುಚ್ಚಿಸಿಕೊಂಡವರು ಹಗಲಿರುಳೂ ಬಿಡುವಿಲ್ಲದೆ ಸಂಕಟಪಡುವರು,” ಎಂದು ಹೇಳಿದನು.


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


“ಅಯ್ಯೋ ! ಅಯ್ಯೋ ! ಮಹಾನಗರಿ ನಿನಗೆಂಥಾ ದುರ್ಗತಿ ! ಕೆನ್ನೀಲಿಯ ಕಡುಗೆಂಪಿನ ನಯವಸ್ತ್ರಗಳನುಟ್ಟವಳೇ, ಹೊನ್ನ ತೊಟ್ಟವಳೇ, ಮತ್ತು ರತ್ನಾಭರಣಗಳನು ಧರಿಸಿದವಳೇ, ತಾಸೊಂದರಲೇ ನಿನ್ನ ಐಸಿರಿಯೆಲ್ಲಾ ವ್ಯರ್ಥವಾಯಿತೇ!” ಎಂದು ದುಃಖಿಸಿ ಅತ್ತು ಗೋಳಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು