Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:20 - ಕನ್ನಡ ಸತ್ಯವೇದವು C.L. Bible (BSI)

20 “ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸರ್‍ಗಾ ತಿಚ್ಯಾ ನಾಸಾಸಾಟ್ನಿ ಖುಶಿ ಹೊ! ದೆವಾಚ್ಯಾ ಲೊಕಾನು, ಅಪೊಸ್ತಲಾನು ಅನಿ ಪ್ರವಾದ್ಯಾನು, ಖುಶಿ ಹೊವಾ! ಕಶ್ಯಾಕ್ ಮಟ್ಲ್ಯಾರ್ ತೆನಿ ತುಮ್ಕಾ ಕರಲ್ಲ್ಯಾ ಸಗ್ಳ್ಯಾ ಕಾಮಾಂಚ್ಯಾ ತಕ್ ದೆವಾನ್ ತಿಕಾ ಶಿಕ್ಷಾ ದಿಲ್ಯಾನಾಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:20
26 ತಿಳಿವುಗಳ ಹೋಲಿಕೆ  

ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ಪ್ರಿಯರೇ, ನಮ್ಮ ಪ್ರಭುವಾದ ಕ್ರಿಸ್ತಯೇಸುವಿನ ಪ್ರೇಷಿತರು. ನಿಮಗೆ ಮುಂಚಿತವಾಗಿ ತಿಳಿಸಿದ ಮಾತುಗಳನ್ನು ನೆನಪುಮಾಡಿಕೊಳ್ಳಿ.


ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ.


ಹೇ ಪ್ರಭು, ಮುಯ್ಯಿತೀರಿಸುವ ದೇವಾ I ಮುಯ್ಯಿತೀರಿಸಲು ಎದ್ದುಬಾರಯ್ಯಾ II


ನಲಿವರು ಸಜ್ಜನರು ಈ ಪ್ರತೀಕಾರ ನೋಟದಲಿ I ಕಾಲುತೊಳೆಯುವರವರು ಆ ದುರ್ಜನರ ನೆತ್ತರಲಿ II


ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಅವರೆನ್ನನು ಶಪಿಸಿದರೂ ನೀನೆನ್ನನು ಹರಸು I ನನ್ನೆದುರಾಳಿಗೆ ಅಪಮಾನವನು ಹೊರಿಸು I ನಿನ್ನ ದಾಸನೆನಗೆ ಆನಂದವನು ಪಾಲಿಸು II


ಇದಕಂಡು ಹಿಗ್ಗುವರು ಸಜ್ಜನರೆಲ್ಲರು I ಬಾಯಿ ಮುಚ್ಚಿಕೊಳ್ಳುವರು ದುರ್ಜನರು II


ಸಿಯೋನ್ ಪಟ್ಟಣಿಗರು ಹರ್ಷಗೊಳ್ಳಲಿ I ಯೆಹೂದ್ಯ ನಗರಗಳು ಆನಂದಪಡಲಿ I ನಿನ್ನ ನ್ಯಾಯವನು ನೆನಪಿಸಿಕೊಳ್ಳಲಿ II


ನನ್ನ ಶತ್ರುಗಳಿಗೆ ವಿಧಿಸುವನಾದೇವ ಪ್ರತಿದಂಡನೆ I ಜನಾಂಗಗಳನು ಅಧೀನಪಡಿಸುವನಾತ ನನಗೆ II


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


ಮತ್ತವಾಗುವುವು ನನ್ನ ಬಾಣಗಳು ರಕ್ತಕುಡಿದು; ನನ್ನ ಕತ್ತಿಯು ತಿನ್ನುವುದು ಸತ್ತವರ, ಖೈದಿಗಳ ರಕ್ತಮಾಂಸವನು; ಚೆಂಡಾಡುವುವು ಶತ್ರುವೀರರ ತಲೆಬುರುಡೆಗಳು.


ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.


ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು