Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:22 - ಕನ್ನಡ ಸತ್ಯವೇದವು C.L. Bible (BSI)

22 “ಎಲೈ ಬಾಬಿಲೋನೇ , ಕಿನ್ನರಿಗಾರರ, ಸಂಗೀತಗಾರರ ಕೊಳಲ ನುಡಿಸುವವರ, ತುತೂರಿಯನೂದುವವರ ಮಧುರ ಗಾನವು ಕೇಳಿಬರದು ನಿನ್ನಲಿ ಮತ್ತೆಂದೂ, ಕುಶಲಕರ್ಮಿಗಳಾರೂ ಕಾಣಸಿಗರು ಇನ್ನೆಂದೂ, ಬೀಸುವ ಕಲ್ಲಿನ ಶಬ್ದವೇ ಇರದು ನಿನ್ನಲ್ಲಿ ಎಂದೆಂದೂ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬಾಬೆಲೇ ನಿನ್ನಲ್ಲಿ ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬಾಬೆಲೇ, ನಿನ್ನಲ್ಲಿ ವೀಣೆಗಾರರೂ ವಾದ್ಯಗಾರರೂ ಕೊಳಲೂದುವವರೂ ತುತೂರಿಯವರೂ ಮಾಡುವ ಧ್ವನಿಯು ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿನ್ನಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ. ಕುಶಲಕರ್ಮಿಗಳಾರೂ ನಿನ್ನಲ್ಲಿ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬಾಬಿಲೋನೇ, ನಿನ್ನಲ್ಲಿ ಮತ್ತೆ ತಂತಿವಾದ್ಯ ನುಡಿಸುವವರು, ಸಂಗೀತಗಾರರು, ಕೊಳಲೂದುವವರು, ತುತೂರಿಯವರು, ಮಾಡುವ ಧ್ವನಿ ಎಂದೂ ಕೇಳಿಸದು. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಎಂದೂ ಕಂಡುಬಾರನು. ಬೀಸುವ ಕಲ್ಲಿನ ಶಬ್ದವು, ನಿನ್ನಲ್ಲಿ ಎಂದೂ ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹಾರ್ಪ್ ಮನ್ತಲ್ಯಾ ವಾಜಾಪಾಚೊ ಆವಾಜ್ ಅನಿ ಮಾನ್ಸಾಂಚಿ ಧನಾ, ಬಾರಿಕ್ಲೊ ಪಂವೊ ಅನಿ ಮೊಟ್ಯಾ ಪಂವ್ಯಾಚೊ ಅವಾಜ್ ತುಜ್ಯಾ ಭುತ್ತುರ್ ಅನಿ ಕನ್ನಾಚ್ ಆಯ್ಕೊ ಯೆಯ್ನಾ! ಕಸ್ಲೆಬಿ ಹೊಂವ್ದಿತ್ ಕಾಮ್ ಕರ್ತಲೊ ಎಕ್‍ಬಿ ಕಾಮ್ಗಾರಿ ತುಜ್ಯಾ ಭುತ್ತುರ್ ಗಾವಿನಾ; ಅನಿ ದಳ್ತಲ್ಯಾ ಮೊಟ್ಯಾ ಗುಂಡ್ಯಾಚೊ ಅವಾಜ್ ಅನಿಫಿಡೆ ಆಯ್ಕೊ ಯೆಯ್ನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:22
10 ತಿಳಿವುಗಳ ಹೋಲಿಕೆ  

ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿ ಇನ್ನು ಕೇಳಿಸದು.


ಇವುಗಳಲ್ಲಿ ಸಂಭ್ರಮ ಸಡಗರಗಳ ಧ್ವನಿಯಾಗಲಿ. ವಧುವರರ ಸ್ವರವಾಗಲಿ ಏಳದಂತೆ ಮಾಡುವೆನು. ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.


ಏಕೆಂದರೆ ಇಸ್ರಯೇಲಿನ ದೇವರೂ ಸರ್ವಶಕ್ತ ಸರ್ವೇಶ್ವರನೂ ಆದ ನಾನು ಹೇಳುತ್ತೇನೆ, ಕೇಳು : ನಿಮ್ಮ ಕಾಲದಲ್ಲೆ, ನಿಮ್ಮ ಕಣ್ಣೆದುರಿಗೆ, ಸಂತೋಷ ಸಂಭ್ರಮದ ಧ್ವನಿಯನ್ನು ನಿಲ್ಲಿಸಿಬಿಡುವೆನು. ವಧೂವರರ ಸದ್ದೂ ಇಲ್ಲವಾಗುವುದು.


ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”


ಕಿವಿಗಳು ಮಂದವಾಗಿ ಹಾದಿಬೀದಿಗಳ ಶಬ್ದವು ಕೇಳಿಸವು. ಬೀಸುವ ಶಬ್ದವು ತಗ್ಗಿ ಹಕ್ಕಿಯ ಶಬ್ದಗಳಷ್ಟು ಕಿರಿದಾಗುವುದು; ಬೀಸುವವರ ಹಾಡೆಲ್ಲಾ ಕುಗ್ಗಿಹೋಗುವುದು;


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


“ಹಿಂಸೆಗೆ ಈಡಾದ ಕನ್ಯೆಯಂತೆ ಇರುವ ಸಿದೋನ್ ನಗರವೇ, ಇನ್ನು ಮೇಲೆ ನಿನಗಿರದು ಸಂತೃಪ್ತಿ: ಸಮುದ್ರ ದಾಟಿ ಸೈಪ್ರಸ್ಸಿಗೆ ಹಾದುಹೋಗು, ಅಲ್ಲಿಯೂ ನಿನಗೆ ದೊರಕದು ವಿಶ್ರಾಂತಿ,” ಎಂದು ಹೇಳಿದ್ದಾರೆ.


ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು,


ಆ ಇರುಳು ಬರಡಾಗಲಿ ಸಂತಸದ ದನಿ ಅದರಲಿ ಕೇಳದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು