Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:23 - ಕನ್ನಡ ಸತ್ಯವೇದವು C.L. Bible (BSI)

23 “ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಕಾಣಿಸುವದಿಲ್ಲ. ವಧೂವರರ ಸ್ವರವು ಇನ್ನೆಂದಿಗೂ ಕೇಳಿಸುವದಿಲ್ಲ. ನಿನ್ನ ವರ್ತಕರು ಭೂವಿುಯ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದಿಂದ ಎಲ್ಲಾ ಜನಾಂಗದವರು ಮರುಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೀಪದ ಬೆಳಕು ಇನ್ನೆಂದಿಗೂ ನಿನ್ನಲ್ಲಿ ಪ್ರಕಾಶಿಸುವುದಿಲ್ಲ. ವಧೂವರರ ಧ್ವನಿಯು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ. ನಿನ್ನ ವರ್ತಕರು ಪ್ರಪಂಚದ ಮಹಾಪುರುಷರಾಗಿದ್ದರು. ನಿನ್ನ ಮಾಟದಿಂದ ಎಲ್ಲಾ ಜನಾಂಗಗಳೂ ಮರುಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿಫಿಡೆ ಕನ್ನಾಚ್ ತುಜ್ಯಾ ಭುತ್ತುರ್ ಉಜ್ವೊಡ್ ದಿತಲೊ ದಿವೊ ಬಗುಕ್ ಗಾವಿನಾ, ಅನಿ ಫಿಡೆ ತುಜ್ಯಾ ಭುತ್ತುರ್ ನ್ಹವ್ರಾ ನ್ಹವ್ರಿಚೊ ಆವಾಜ್ ಆಯ್ಕೊ ಯೆಯ್ನಾ, ತುಜ್ಯಾ ಭುತ್ತುರ್ ಯಾಪಾರ್ ಕರ್ತಲೆ ಜಗಾತ್ ಲೈ ಘಟ್ಮುಟ್ ಹೊತ್ತೆ, ಅನಿ ತುಜ್ಯಾ ಝುಟ್ಯಾ ಜಾದುವಾಂಚ್ಯಾ ವೈನಾ ತಿಯಾ ಜಗಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಮಳ್ಳ್ ಕರ್‍ಲೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:23
26 ತಿಳಿವುಗಳ ಹೋಲಿಕೆ  

ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಇದರ ವ್ಯಾಪಾರಿಗಳು ವಿಶ್ವವಿಖ್ಯಾತರು. ಇಂಥ ಟೈರ್ ಪಟ್ಟಣಕ್ಕೆ ನಾಶವೊದಗಿದುದನ್ನು ಯೋಚಿಸಿದವರಾರು?


ಇದೆಲ್ಲ ಆಗುವುದು ಅಮಿತ ಹಾದರದ ನಿಮಿತ್ತ ರಾಷ್ಟ್ರಗಳನು ತನ್ನ ಬೆಡಗು ಬಿನ್ನಾಣಗಳಿಂದ ಜಾರತನಕ್ಕೂ ಗುಲಾಮತನಕ್ಕೂ ಆಕೆ ತಂದುದರಿಂದ.


ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಏಕೆಂದರೆ ಇಸ್ರಯೇಲಿನ ದೇವರೂ ಸರ್ವಶಕ್ತ ಸರ್ವೇಶ್ವರನೂ ಆದ ನಾನು ಹೇಳುತ್ತೇನೆ, ಕೇಳು : ನಿಮ್ಮ ಕಾಲದಲ್ಲೆ, ನಿಮ್ಮ ಕಣ್ಣೆದುರಿಗೆ, ಸಂತೋಷ ಸಂಭ್ರಮದ ಧ್ವನಿಯನ್ನು ನಿಲ್ಲಿಸಿಬಿಡುವೆನು. ವಧೂವರರ ಸದ್ದೂ ಇಲ್ಲವಾಗುವುದು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


“ಎಲೈ ಬಾಬಿಲೋನೇ , ಕಿನ್ನರಿಗಾರರ, ಸಂಗೀತಗಾರರ ಕೊಳಲ ನುಡಿಸುವವರ, ತುತೂರಿಯನೂದುವವರ ಮಧುರ ಗಾನವು ಕೇಳಿಬರದು ನಿನ್ನಲಿ ಮತ್ತೆಂದೂ, ಕುಶಲಕರ್ಮಿಗಳಾರೂ ಕಾಣಸಿಗರು ಇನ್ನೆಂದೂ, ಬೀಸುವ ಕಲ್ಲಿನ ಶಬ್ದವೇ ಇರದು ನಿನ್ನಲ್ಲಿ ಎಂದೆಂದೂ !


ಅವಳೊಡನೆ ವ್ಯಭಿಚಾರಮಾಡಿದ ಹಾಗೂ ಭೋಗವಿಲಾಸದಿಂದ ಬಾಳಿದ ಭೂರಾಜರು ಅವಳನ್ನು ದಹಿಸುವ ಚಿತೆಯಿಂದ ಮೇಲೇರುವ ದಟ್ಟ ಹೊಗೆಯನ್ನು ದಿಟ್ಟಿಸಿ ನೋಡಿ ಶೋಕಿಸುವರು.


ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.


ಕೆಟ್ಟವನಿಗೆ ಶುಭಕಾಲ ಬಾರದು, ದುಷ್ಟರ ದೀಪ ಆರಿಹೋಗುವುದು.


ಆ ದುರುಳರ ದೀಪ ಆರಿಹೋದದ್ದು ಎಷ್ಟುಸಾರಿ? ಅವರಿಗೆ ವಿಪತ್ತು ಸಂಭವಿಸಿದ್ದು ಎಷ್ಟುಸಾರಿ? ಅವರ ಕೋಪ ಅವರಿಗೆ ಸಂಕಟ ತಂದದ್ದು ಎಷ್ಟುಬಾರಿ?


ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?’ ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ಬಹುಕಾಲದಿಂದ ಇವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಬೆಲೆಕೊಡುತ್ತಿದ್ದರು.


ಒಂದೇ ದಿನದೊಳಗೆ, ಒಂದೇ ಕ್ಷಣದೊಳಗೆ ಪುತ್ರಶೋಕ, ವೈಧವ್ಯ - ಇವೆರಡು ಒದಗುವುವು ನಿನಗೆ. ಎಷ್ಟೇ ಮಂತ್ರತಂತ್ರಗಳನು ನಡೆಸಿದರೂ ಅನುಭವಿಸುವೆ ನೀ ಪೂರ್ತಿಯಾಗಿ ಇವುಗಳನು.


ಇವುಗಳಲ್ಲಿ ಸಂಭ್ರಮ ಸಡಗರಗಳ ಧ್ವನಿಯಾಗಲಿ. ವಧುವರರ ಸ್ವರವಾಗಲಿ ಏಳದಂತೆ ಮಾಡುವೆನು. ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.


ಭೂರಾಜರು, ಅಧಿಪತಿಗಳು, ಸೇವಾನಾಯಕರು, ಸಿರಿವಂತರು, ಪರಾಕ್ರಮಿಗಳು, ದಾಸರು, ಸ್ವತಂತ್ರರು ಎಲ್ಲರೂ ಓಡಿಹೋಗಿ ಬೆಟ್ಟಗಳ ಗವಿಗಳಲ್ಲೂ ಮತ್ತು ಬಂಡೆಗಳ ಸಂದುಗಳಲ್ಲೂ ಅವಿತುಕೊಂಡರು.


ಇಷ್ಟೇ ಅಲ್ಲದೆ ತಮ್ಮ ಕೊಲೆಗಡುಕತನ, ಮಾಟಮಂತ್ರ, ಹಾದರ ಮತ್ತು ಕಳ್ಳತನಗಳನ್ನು ತೊರೆದು ಮನಸ್ಸಾಂತರಗೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು