Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:3 - ಕನ್ನಡ ಸತ್ಯವೇದವು C.L. Bible (BSI)

3 ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಲ್ಲಾ ಜನಾಂಗಗಳು ಅವಳ ಅತಿಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳು ಸುಖಭೋಗಿನಿಯಾಗಿದ್ದದರಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು. ಭೂಲೋಕದ ರಾಜರುಗಳೆಲ್ಲ ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಭೂಲೋಕದ ವರ್ತಕರು ಅವಳ ಅತಿಯಾದ ಸುಖದಿಂದ ಶ್ರೀಮಂತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಎಲ್ಲಾ ದೇಶಗಳೂ ಆಕೆಯ ಜಾರತ್ವಗಳೆಂಬ ಅತ್ಯಾಸಕ್ತಿಯ ದ್ರಾಕ್ಷಾರಸವನ್ನು ಕುಡಿದಿವೆ. ಭೂಲೋಕದ ಅರಸರು ಆಕೆಯೊಂದಿಗೆ ವ್ಯಭಿಚಾರ ಮಾಡಿದರು, ಭೂಲೋಕದ ವರ್ತಕರು ಆಕೆಯ ಭೋಗ ವಸ್ತುಗಳಿಂದ ಸಿರಿವಂತರಾದರು,” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಸಗ್ಳ್ಯಾ ದೆಶಾನಿ ತಿಚಿ ವಾಯ್ನ್ ಫಿಲ್ಯಾನಾತ್. ಜಗಾಚ್ಯಾ ಸಗ್ಳ್ಯಾ ರಾಜಾನಿ ತಿಚೆವಾಂಗ್ಡಾ ಬುರ್ಶೊ ಆಂಗಾಚೊ ಸಮ್ಮಂದ್ ಕರಲ್ಲ್ಯಾನಿ, ತಿಚ್ಯಾ ಪೊಜ್ಡ್ಯಾಪಾನಾಚ್ಯಾ ಕಾಮಾ ವೈನಾ ಹ್ಯಾ ಜಗಾತ್ಲಿ ಯಾಪಾರ್ ಕರ್ತಲಿ ಲೊಕಾ ಸಾವ್ಕಾರ್ ಹೊವ್ಕ್ ಲಾಗಲ್ಲಿ”. ಮನುನ್ ಬೊಬ್ ಮಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:3
17 ತಿಳಿವುಗಳ ಹೋಲಿಕೆ  

ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.


ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು.


ಅವಳೊಡನೆ ವ್ಯಭಿಚಾರಮಾಡಿದ ಹಾಗೂ ಭೋಗವಿಲಾಸದಿಂದ ಬಾಳಿದ ಭೂರಾಜರು ಅವಳನ್ನು ದಹಿಸುವ ಚಿತೆಯಿಂದ ಮೇಲೇರುವ ದಟ್ಟ ಹೊಗೆಯನ್ನು ದಿಟ್ಟಿಸಿ ನೋಡಿ ಶೋಕಿಸುವರು.


“ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.


ಬಾಬಿಲೋನ್ ನನ್ನ ಕೈಯಲ್ಲಿರುವ ಹೊನ್ನಿನ ಪಾನಪಾತ್ರೆ. ಲೋಕದವರೆಲ್ಲರು ಅದರಿಂದ ಕುಡಿದು ಮತ್ತರಾದರು. ರಾಷ್ಟ್ರಗಳು ಅದರಿಂದ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಮೃಷ್ಟಾನ್ನ ಉಣ್ಣುತ್ತಿದ್ದವರು ದಿಕ್ಕೆಟ್ಟು ಅಲೆಯುತ್ತಿರುವರು ಚಿಕ್ಕಂದಿನಿಂದಲೆ ನಾರುಮಡಿಯನ್ನು ತೊಡುತ್ತಿದ್ದವರು ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿಗೆ ಇಳಿದಿರುವರು.


ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ನನ್ನನ್ನು ಮುರಿದು ತಿಂದುಬಿಟ್ಟ ನನ್ನನ್ನು ಕುಡಿದು ಬಿಸಾಡಿದ ಪಾತ್ರೆಯನ್ನಾಗಿಸಿಬಿಟ್ಟ. ಘಟಸರ್ಪದ ಹಾಗೆ ನನ್ನನ್ನು ನುಂಗಿದ ನನ್ನ ರುಚಿಪದಾರ್ಥಗಳಿಂದ ಹೊಟ್ಟೆ ತುಂಬಿಸಿಕೊಂಡ ಮಿಕ್ಕಿದುದನ್ನೆಲ್ಲ ತೊಳೆದು ಎಸೆದುಬಿಟ್ಟ.


ಇಂತಾಗುವುದು ನೀ ಗೈದ ಪ್ರಯತ್ನಗಳೆಲ್ಲ. ಬಾಲ್ಯದಿಂದ ನಿನ್ನೊಡನೆ ವ್ಯವಹರಿಸಿದವರು ಸರಿವರು ದೂರಕೆ ಹಿಂದಿರುಗುವರೆಲ್ಲರು ತಂತಮ್ಮ ನಾಡಿಗೆ ಅಂತ್ಯದಲಿ ಯಾರೂ ಆಗರು ರಕ್ಷಣೆ ನಿನಗೆ.”


ಇಲ್ಲವಾದರೆ ಮತ್ತೇನನ್ನು ನೋಡಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿರುವ ವ್ಯಕ್ತಿಯನ್ನೇ? ಅಂಥ ಶೃಂಗಾರವಾದ ಉಡುಗೆತೊಡುಗೆಯನ್ನು ಧರಿಸಿ, ಭೋಗಜೀವನ ನಡೆಸುವವರು ಅರಮನೆಗಳಲ್ಲಿರುತ್ತಾರಷ್ಟೆ!


ಇದೆಲ್ಲ ಆಗುವುದು ಅಮಿತ ಹಾದರದ ನಿಮಿತ್ತ ರಾಷ್ಟ್ರಗಳನು ತನ್ನ ಬೆಡಗು ಬಿನ್ನಾಣಗಳಿಂದ ಜಾರತನಕ್ಕೂ ಗುಲಾಮತನಕ್ಕೂ ಆಕೆ ತಂದುದರಿಂದ.


ಯೌವನಸ್ಥ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ, ಯೇಸುಕ್ರಿಸ್ತರಿಂದ ವಿಮುಖರನ್ನಾಗಿಸುವ ಕಾಮನೆಗಳು ಇವರನ್ನು ಮರುಮದುವೆಗೆ ಹುರಿದುಂಬಿಸಬಹುದು.


ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು