Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:6 - ಕನ್ನಡ ಸತ್ಯವೇದವು C.L. Bible (BSI)

6 ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇತರರಿಗೆ ಅವಳು ಮಾಡಿದ ಪ್ರಕಾರ ಅವಳಿಗೆ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ; ಅವಳು ಕಲಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ನಗರಿಯು ಬೇರೆಯವರಿಗೆ ಕೊಟ್ಟಂತೆ ನೀವೂ ಅವಳಿಗೆ ಕೊಡಿರಿ. ಅವಳು ಮಾಡಿದ್ದಕ್ಕೆ ಪ್ರತಿಯಾಗಿ ಎರಡರಷ್ಟನ್ನು ಅವಳಿಗೆ ಕೊಡಿರಿ. ಅವಳು ಇತರರಿಗೆ ಕೊಟ್ಟ ದ್ರಾಕ್ಷಾರಸಕ್ಕಿಂತ ಎರಡರಷ್ಟು ಗಟ್ಟಿಯಾದ ದ್ರಾಕ್ಷಾರಸವನ್ನು ಅವಳಿಗೆ ಸಿದ್ಧಪಡಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ಕಶೆ ತುಮ್ಕಾ ಕರ್ಲಿನ್ ತಸೆಚ್ ತುಮಿಬಿ ತಿಕಾ ಕರಾ; ತೆನಿ ಕರಲ್ಲ್ಯಾ ಸಗ್ಳ್ಯಾಚ್ಯಾಸಾಟಿ ದೊನ್‍ಪಟ್ ತಿಕಾ ಫಾಟಿ ಪರ್ತುನ್ ದಿವಾ. ತಿನಿ ಕಶೆ ತುಮ್ಕಾ ಖಡಕ್ ಹೊತ್ತೆ ಫಿವ್ಕ್ ದಿಲ್ಲಿನ್ ತಸೆ ತುಮಿ ತಿಚ್ಯಾ ವಾಟ್ಕ್ಯಾತ್ನಾ ದೊನ್‍ಪಟ್ ಖಡಕ್ ಹೊತ್ತೆ ತಿಕಾ ಫಿವ್ಕ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:6
21 ತಿಳಿವುಗಳ ಹೋಲಿಕೆ  

“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.


ಬಾಬಿಲೋನ್ ನಗರವೇ ಕೇಳು : ಅಳಿವು ಕಾದಿದೆ ನಿನಗೆ I ಭಲೆ, ನೀನೆಮಗೆ ಮಾಡಿದ್ದಕ್ಕೆ ಮುಯ್ ತೀರಿಸುವವಗೆ I ನಿನ್ನ ಮಕ್ಕಳನೆತ್ತಿ ಬಂಡೆಗಪ್ಪಳಿಸುವವನಿಗೆ II


ಆದರ ಸುತ್ತಲು ರಣಘೋಷಮಾಡಿರಿ. ಇಗೋ, ಅದು ಶರಣಾಗತವಾಯಿತು! ಅದರ ಕೋಟೆಕೊತ್ತಲಗಳು ಬಿದ್ದವು. ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಸರ್ವೇಶ್ವರನಾದ ನಾನು ಅದಕ್ಕೆ ಮುಯ್ಯಿತೀರಿಸಿದ್ದೇನೆ. ನೀವೂ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ.


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


“ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.


ಆ ಸ್ತ್ರೀ ಕೆನ್ನೀಲಿಯ ಹಾಗೂ ಕಡುಗೆಂಪಾದ ಬಟ್ಟೆಯನ್ನು ಧರಿಸಿದ್ದಳು; ಚಿನ್ನ, ಮುತ್ತು, ರತ್ನಾಭರಣಗಳಿಂದ ಅಲಂಕೃತಳಾಗಿದ್ದಳು. ಕೈಯಲ್ಲಿ ಚಿನ್ನದ ಪಾತ್ರೆಯನ್ನೂ ಹಿಡಿದಿದ್ದಳು. ಅವಳ ಹಾದರದ ಅಸಹ್ಯಗಳಿಂದಲೂ ಕಳಂಕಗಳಿಂದಲೂ ಅದು ತುಂಬಿತ್ತು.


ನಂಬಿಕೆಯಿಂದ ಕಾದಿರುವ ಸೆರೆಯಾಳುಗಳೇ, ಹಿಂದಿರುಗಿರಿ ನಿಮ್ಮ ಸುಭದ್ರ ದುರ್ಗಸ್ಥಾನಕೆ ಇಗೋ, ಈಗಲೂ ಘೋಷಿಸುತ್ತಿರುವೆ: ನಿಮಗಿಮ್ಮಡಿ ಸೌಭಾಗ್ಯ ನೀಡುವೆ.


ನನಗಲ್ಲ, ನನ್ನ ಹಿಂಸಕರಿಗೆ ಅವಮಾನವಾಗಲಿ. ಭಯಭ್ರಾಂತಿ ನನ್ನನ್ನಲ್ಲ, ಅವರನ್ನು ಅಪಹರಿಸಲಿ. ಅವರಿಗೆ ಕೇಡುಗಾಲವನ್ನು ಬರಮಾಡಿ ಬೇರುಸಹಿತ ಅವರನ್ನು ನಾಶಪಡಿಸಿರಿ !


ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”


ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು.


ಹತರಾದ ಇಸ್ರಯೇಲರೇ, ಬಾಬಿಲೋನಿಯದ ಹಿತಕ್ಕಾಗಿ ಬಹುಜನ ಹತರಾದರು. ಅಂತೆಯೇ ಬಾಬಿಲೋನ್ ಹತವಾಗುವುದು. ಸರ್ವೇಶ್ವರನಾದ ನನ್ನ ನುಡಿ ಇದು.”


ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ಸಿಗುವುದು ನಿಮಗಾದ ಅವಮಾನಕೆ ಇಮ್ಮಡಿ ಹಿರಿತನ ಆದ ತಿರಸ್ಕಾರಕೆ ಪ್ರತಿಯಾಗಿ ಸಂತಸ ಸಿರಿತನ. ದ್ವಿಗುಣವಾಗುವುದು ನಿಮಗೆ ನಾಡಿನ ಸಂಪದ ಅನಂತಕಾಲಕ್ಕು ನಿಮಗಿರುವುದು ಆನಂದ.


ಕೇಡಿಗರು ಪರರಿಗೆ ಮಾಡಿದುದ ತಾವೇ ಉಣ್ಣಮಾಡು I ಅವರ ದುಷ್ಟಕಾರ್ಯಗಳಿಗೆ ತಕ್ಕುದಾದ ಶಿಕ್ಷೆ ನೀಡು II


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


“ಹೇ, ಸರ್ವೇಶ್ವರಾ, ಅವರ ದುಷ್ಕೃತ್ಯಗಳಿಗೆ ತಕ್ಕ ಪ್ರತೀಕಾರ ನೀಡು ಅವರಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು