Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:7 - ಕನ್ನಡ ಸತ್ಯವೇದವು C.L. Bible (BSI)

7 ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವಳು ಎಷ್ಟು ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಾಳೋ ಅಷ್ಟು ಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಅವಳು ತನ್ನ ಹೃದಯದಲ್ಲಿ - ನಾನು ರಾಣಿಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವಳು ತನ್ನನ್ನು ಘನಪಡಿಸಿಕೊಂಡು ವೈಭವದಿಂದ ಜೀವಿಸಿದಳು. ಆದ್ದರಿಂದ ಅದಕ್ಕೆ ತಕ್ಕಂತೆ ಸಂಕಟವನ್ನೂ ದುಃಖವನ್ನೂ ಅವಳಿಗೆ ಬರಮಾಡಿರಿ. ‘ನಾನು ನನ್ನ ಸಿಂಹಾಸನದ ಮೇಲೆ ಕುಳಿತಿರುವ ರಾಣಿ. ನಾನು ವಿಧವೆಯಲ್ಲ, ನಾನು ಎಂದೆಂದಿಗೂ ದುಃಖಿಸುವುದಿಲ್ಲ’ ಎಂದು ಅವಳು ತನಗೆ ತಾನೇ ಹೇಳಿಕೊಳ್ಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಿ ಕವ್ಡೆ ಸುಖಾನ್ ಅನಿ ಆರಾಮಾನ್ ಹೊತ್ತಿ ತೆಚೆನ್ ಜಾಸ್ತಿಚೊ ಕಸ್ಟ್ ಅನಿ ತರಾಸ್ ತುಮಿ ತಿಕಾ ದಿವಾ. ಕಶ್ಯಾಕ್ ಮಟ್ಲ್ಯಾರ್ ತಿ ಅಪ್ನಾಕುಚ್, ಹಿತ್ತೆ ಎಕ್ ರಾನಿ ಮಿಯಾ ಬಸ್ಲಾ ಮಿಯಾ ಘೊಮರಲ್ಲಿ ಬಾಯ್ಕೊಮನುಸ್ ನ್ಹಯ್, ಮಾಕಾ ಕನ್ನಾಚ್ ಕಸ್ಟ್ ಮನ್ತಲೊ ರ್‍ಹಾಯ್ನಾ! ಮನುನ್ ಘೆವ್‍ಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:7
16 ತಿಳಿವುಗಳ ಹೋಲಿಕೆ  

“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !


ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.


ರಾಜಕುವರಿಯರಿಹರು ನಿನ್ನ ಸ್ತ್ರೀ ಪರಿವಾರದಲಿ I ಪಟ್ಟದ ರಾಣಿಯು ನಿಂತಿಹಳು ನಿನ್ನ ಬಲಪಾರ್ಶ್ವದಲಿ I ಓಫಿರ್ ನಾಡಿನ ಚಿನ್ನಾಭರಣಗಳಿಂದ ಭೂಷಿತಳಾಗಿ II


ನೆನೆವನು ಮನದೊಳು ದುರುಳನಿಂತು: I “ಯಾರಿಗೂ ನನ್ನ ಕದಲಿಸಲಾಗದು I ಬಾರದು ನನಗೆಂದಿಗು ಆಪತ್ತು” II


ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.


ಯೌವನಸ್ಥ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ, ಯೇಸುಕ್ರಿಸ್ತರಿಂದ ವಿಮುಖರನ್ನಾಗಿಸುವ ಕಾಮನೆಗಳು ಇವರನ್ನು ಮರುಮದುವೆಗೆ ಹುರಿದುಂಬಿಸಬಹುದು.


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಅವಳೊಡನೆ ವ್ಯಭಿಚಾರಮಾಡಿದ ಹಾಗೂ ಭೋಗವಿಲಾಸದಿಂದ ಬಾಳಿದ ಭೂರಾಜರು ಅವಳನ್ನು ದಹಿಸುವ ಚಿತೆಯಿಂದ ಮೇಲೇರುವ ದಟ್ಟ ಹೊಗೆಯನ್ನು ದಿಟ್ಟಿಸಿ ನೋಡಿ ಶೋಕಿಸುವರು.


ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಬಾಗಿಲಲ್ಲಿ ಕುಳಿತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು. ನೀನು ಸಲಹೆ ಮಾಡಿದವುಗಳಲ್ಲಿ ಒಂದನ್ನೂ ಬಿಡದೆ, ಚಾಚೂತಪ್ಪದೆ ನೆರವೇರಿಸು,” ಎಂದು ಅಪ್ಪಣೆಮಾಡಿದನು.


ಅದರ ಬೋಕಿಗಳನ್ನು ಕಚ್ಚಿ, ನೆಕ್ಕಿ, ನಿನ್ನ ಮೊಲೆಗಳನ್ನು ಬಗೆದುಕೊಳ್ಳುವೆ. ಇದು ನನ್ನ ಅಪ್ಪಣೆ ಎಂಬುದೇ ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು