Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:9 - ಕನ್ನಡ ಸತ್ಯವೇದವು C.L. Bible (BSI)

9 ಅವಳೊಡನೆ ವ್ಯಭಿಚಾರಮಾಡಿದ ಹಾಗೂ ಭೋಗವಿಲಾಸದಿಂದ ಬಾಳಿದ ಭೂರಾಜರು ಅವಳನ್ನು ದಹಿಸುವ ಚಿತೆಯಿಂದ ಮೇಲೇರುವ ದಟ್ಟ ಹೊಗೆಯನ್ನು ದಿಟ್ಟಿಸಿ ನೋಡಿ ಶೋಕಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9-10 “ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾಗಿ ಬದುಕಿದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡುವಾಗ ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ಎದೆ ಬಡುಕೊಳ್ಳುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವಳೊಂದಿಗೆ ಲೈಂಗಿಕ ಪಾಪಮಾಡಿ ಅವಳ ಸಂಪತ್ತಿನಲ್ಲಿ ಪಾಲುಗಾರರಾದ ಲೋಕದ ರಾಜರುಗಳು ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾರೆ. ಅವಳು ಸಾಯುತ್ತಿರುವುದನ್ನು ಕಂಡು ರಾಜರುಗಳು ಗೋಳಾಡುವರು ಮತ್ತು ದುಃಖಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆಕೆಯೊಂದಿಗೆ ಜಾರತ್ವ ಮಾಡಿರುವ ಭೂರಾಜರು, ಆಕೆಯ ದಹನದಿಂದ ಏರುವ ಹೊಗೆಯನ್ನು ಕಂಡಾಗೆಲ್ಲಾ ಆಕೆಗಾಗಿ ಅಳುತ್ತಾ ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 “ತಿಕಾ ಜಾಳ್ವುತಲ್ಯಾ ರಕ್ಕೆಕ್ ಅನಿ ಡುಕ್ಟಾಕ್ ಬಗುನ್ ತಿಚ್ಯಾ ವಾಂಗ್ಡಾ ಬುರ್ಶೊ ಸಮಂದ್ ಕರುನ್ ಘೆವ್ನ್ ಹೊತ್ತೆ ಹ್ಯಾ ಜಗಾಚೆ ರಾಜಾ ತ್ಯಾ ಶಾರಾಸಾಟ್ನಿ ರಡ್ತ್ಯಾತ್, ಅನಿ ಮರಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:9
24 ತಿಳಿವುಗಳ ಹೋಲಿಕೆ  

ಅವರು ಮತ್ತೊಮ್ಮೆ, “ಅಲ್ಲೆಲೂಯ ! ಅವಳ ದಹನದಿಂದ ಹೊಗೆ ಸತತ ಮೇಲೇರುತಿಹುದು ಒಂದೇಸಮನೆ,” ಎಂದು ಕೂಗಿದರು.


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಅವರು ಅವಳನ್ನು ದಹಿಸಿದ ಬೆಂಕಿಯ ದಟ್ಟ ಹೊಗೆಯನ್ನು ಕಂಡು, “ಈ ಮಹಾನಗರಿಗೆ ಸರಿಸಮನಾದ ನಗರವೊಂದುಂಟೇ?” ಎಂದು ಉದ್ಗರಿಸಿದರು.


ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಅಂಥವರ ನರಳಾಟದ ಹೊಗೆ ಸತತ ಮೇಲೇರುತ್ತಿರುತ್ತದೆ. ಮೃಗಕ್ಕೂ ಅದರ ವಿಗ್ರಹಕ್ಕೂ ಪೂಜೆಸಲ್ಲಿಸುವವರು ಮತ್ತು ಅದರ ಹೆಸರನ್ನು ಸೂಚಿಸುವ ಹಚ್ಚೆಯನ್ನು ಚುಚ್ಚಿಸಿಕೊಂಡವರು ಹಗಲಿರುಳೂ ಬಿಡುವಿಲ್ಲದೆ ಸಂಕಟಪಡುವರು,” ಎಂದು ಹೇಳಿದನು.


ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ಬಾಬಿಲೋನ್ ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿ ಕಂಪಿಸುವುದು. ಅದರ ಮೊರೆ ರಾಷ್ಟ್ರಗಳಿಗೆ ಕೇಳಿಸುವುದು.


ಸೊದೋಮ್ - ಗೊಮೋರ ಹಾಗೂ ಆ ಬಯಲುಸೀಮೆಯತ್ತ ಅವನು ಕಣ್ಣುಹಾಯಿಸಿದಾಗ, ಇಗೋ, ಆ ಪ್ರದೇಶದಿಂದ ಹೊಗೆ, ದೊಡ್ಡ ಆವಿಗೆಯ ಹೊಗೆಯಂತೆ ಭುಗಿಲೇರುತ್ತಿತ್ತು.


ಯಾರೂ ನೆಲಸಲಾಗಲಿಲ್ಲ ನಾನು ಕೆಡವಿದಾ ಸೊದೋಮ್ ಗೊಮೋರ ನಗರಗಳಲ್ಲಿ ಅದರ ಸುತ್ತಮುತ್ತಣ ಊರುಗಳಲ್ಲಿ ಯಾರೂ ವಾಸಿಸರು ಯಾವ ನರಪ್ರಾಣಿಯೂ ನೆಲಸದು, ಬಾಬಿಲೋನಿನಲ್ಲಿ.


ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ಆ ಮರವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿ, ಎಲೆಗಳನ್ನು ಉದುರಿಸಿ, ಹಣ್ಣುಗಳನ್ನು ಕಿತ್ತುಬಿಸಾಡಿ. ಮೃಗಗಳು ಅದರ ನೆರಳನ್ನು ಬಿಟ್ಟು ತೆರಳಲಿ, ಪಕ್ಷಿಗಳು ರೆಂಬೆಗಳನ್ನು ತೊರೆದುಹೋಗಲಿ.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ನಲಿವರು ಸಜ್ಜನರು ಈ ಪ್ರತೀಕಾರ ನೋಟದಲಿ I ಕಾಲುತೊಳೆಯುವರವರು ಆ ದುರ್ಜನರ ನೆತ್ತರಲಿ II


ಬಾಬಿಲೋನ್ ತಟ್ಟನೆ ಬಿದ್ದು ಹಾಳಾಯಿತು. ಅದಕ್ಕಾಗಿ ಗೋಳಾಡಿ. ಅದರ ನೋವನ್ನು ನೀಗಿಸಲು ಔಷಧವನ್ನು ತನ್ನಿ. ಒಂದು ವೇಳೆ ಅದು ಗುಣವಾದೀತು!


ನಿನ್ನೀ ಗತಿಗೆ ಬೆರಗಾಗಿಹರು ಕರಾವಳಿಯ ಸರ್ವನಿವಾಸಿಗಳು, ರೋಮಾಂಚಿತರಾಗಿಹರು ಮೊಗಗೆಟ್ಟು ರಾಜರಾಜರುಗಳು;


ಯೌವನಸ್ಥ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ, ಯೇಸುಕ್ರಿಸ್ತರಿಂದ ವಿಮುಖರನ್ನಾಗಿಸುವ ಕಾಮನೆಗಳು ಇವರನ್ನು ಮರುಮದುವೆಗೆ ಹುರಿದುಂಬಿಸಬಹುದು.


ಇಗೋ ನೋಡು, ಅವಳು ರೋಗದಿಂದ ಹಾಸಿಗೆ ಹಿಡಿಯುವಂತೆ ಮಾಡುತ್ತೇನೆ. ಅವಳೊಡನೆ ವ್ಯಭಿಚಾರ ಮಾಡುವವರು ಅವಳ ದುಷ್ಕೃತ್ಯಗಳನ್ನು ತ್ಯಜಿಸಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗದೆಹೋದರೆ, ಅವರು ಭೀಕರ ಕಷ್ಟನಷ್ಟಗಳಿಗೆ ಗುರಿಯಾಗುವಂತೆ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು