Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:11 - ಕನ್ನಡ ಸತ್ಯವೇದವು C.L. Bible (BSI)

11 ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಾನಾ ಸರ್ಗ್ ಉಗಡಲ್ಲೆ ಮಿಯಾ ಬಗಟ್ಲೊ, ಥೈ ಎಕ್ ಫಾಂಡ್ರೆ ಘೊಡ್ಕೆ ಹೊತ್ತೆ. ತೆಚೆ ವರ್ತಿ ಸವಾರಿ ಕರ್ತಲ್ಯಾಕ್ ವಿಶ್ವಾಸಾಚೊ ಅನಿ ಖರೊ ಮನುನ್ ಬಲ್ವುತ್ಯಾತ್; ತೊ ನ್ಯಾಯ್‍ನಿತಿನ್ ನಿರ್ನಯ್ ಕರ್‍ತಾ ಅನಿ ಅಪ್ನಾಚ್ಯಾ ಮಾರಾಮಾರಿಯಾ ಖೆಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:11
28 ತಿಳಿವುಗಳ ಹೋಲಿಕೆ  

ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ಆಗ ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ಬಿಲ್ಲೊಂದು ಇತ್ತು. ಅವನಿಗೆ ಜಯಮಾಲೆಯನ್ನು ಹಾಕಲಾಗಿತ್ತು. ಅವನು ಜಯಪ್ರದನಾಗಿ, ಜಯದ ಮೇಲೆ ಜಯಗಳಿಸುವ ಸಲುವಾಗಿ ಹೊರಟುಹೋದನು.


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಇಗೋ, ರಾಜನೊಬ್ಬನು ನೀತಿಗನುಸಾರ ರಾಜ್ಯವಾಳುವನು. ದೇಶಾಧಿಪತಿಗಳು ನ್ಯಾಯದಿಂದ ದೊರೆತನಮಾಡುವರು.


ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ರಾತ್ರಿಯಲ್ಲಿ ನನಗೆ ಈ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನೇರಿದ್ದ ಒಬ್ಬ ವ್ಯಕ್ತಿ ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದಾನೆ. ಅವನ ಹಿಂದೆ ಕೆಂಪು, ನಸುಗೆಂಪು ಮತ್ತು ಬಿಳಿಯ ಕುದುರೆಗಳಿವೆ.


ಸರ್ವೇಶ್ವರನು ಯುದ್ಧಶೂರನು ‘ಸರ್ವೇಶ್ವರ’ ಎಂಬುದು ಆತನ ನಾಮಧೇಯವು.


ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.


ಅನಂತರ ಆ ಮೃಗವನ್ನು ಕಂಡೆ. ಕುದುರೆಯ ಮೇಲೆ ಕುಳಿತಿದ್ದಾತನ ಮೇಲೂ ಅವನ ಸೈನ್ಯದ ಮೇಲೂ ಯುದ್ಧಮಾಡುವುದಕ್ಕಾಗಿ, ಆ ಮೃಗವೂ ಭೂಲೋಕದ ರಾಜರೂ ಅವರ ಸೈನ್ಯಗಳೊಡನೆ ಒಟ್ಟಾಗಿ ಸೇರಿಬಂದರು.


ಇನ್ನುಳಿದವರು ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹೊರಟ ಖಡ್ಗದಿಂದ ಹತರಾದರು; ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಆಹಾರವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು