Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:14 - ಕನ್ನಡ ಸತ್ಯವೇದವು C.L. Bible (BSI)

14 ಸ್ವರ್ಗದ ಸೈನಿಕರು ಬಿಳಿಯ ಕುದುರೆಗಳನ್ನೇರಿ ಆತನನ್ನು ಹಿಂಬಾಲಿಸಿದರು. ಅವರು ಶುಭ್ರವಾದ ಬಿಳಿಯ ಸಮವಸ್ತ್ರಗಳನ್ನು ಧರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪರಲೋಕದಲ್ಲಿರುವ ಸೈನ್ಯದವರು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನ ಹಿಂದೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪರಲೋಕದ ಸೈನ್ಯಗಳು ಬಿಳಿ ಕುದುರೆಗಳ ಮೇಲೆ ಆತನನ್ನು ಹಿಂಬಾಲಿಸುತ್ತಿದ್ದವು. ಅವರು ಬಿಳುಪಾಗಿಯೂ ಶುಭ್ರವಾಗಿಯೂ ಇದ್ದ ನಯವಾದ ನಾರಮಡಿಯನ್ನು ಧರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪರಲೋಕದ ಸೈನ್ಯದವರು ಶುಭ್ರ ಹಾಗೂ ಬಿಳಿಯ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳಿಯ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಸರ್ಗಾಚ್ಯಾ ಸೈನಿಕಾಂಚೆ ತಾಂಡೆ ಪವಿತ್ರ್ ಫಾಂಡ್ರೆ ಲೈ ಕಿಮ್ತಿಚೆ ಕಪ್ಡೆ ನೆಸುನ್, ಫಾಂಡ್ರ್ಯಾ ಘೊಡ್ಕ್ಯಾಂಚ್ಯಾ ವೈನಾ ತ್ಯೆಚ್ಯಾ ಫಾಟ್ನಾ ಸವಾರಿ ಕರುನ್ ಯೆಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:14
18 ತಿಳಿವುಗಳ ಹೋಲಿಕೆ  

ದಿವ್ಯವಾದುವು, ಭವ್ಯವಾದುವು, ಮೌಲ್ಯವಾದುವು, ಆಕೆಗಿತ್ತ ಉಡುಗೆತೊಡುಗೆಗಳು; ಸತ್ಕಾರ್ಯಗಳೇ ದೇವಜನರು ಧರಿಸುವ ಅಮೂಲ್ಯ ಉಡುಗೆತೊಡುಗೆಗಳು.”


ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಆತನ ರೂಪ ಮಿಂಚಿನಂತೆ ಹೊಳೆಯುತ್ತಿತ್ತು; ಉಡುಪು ಹಿಮದಂತೆ ಬೆಳ್ಳಗಿತ್ತು.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.


ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.


ಪಟ್ಟಣದ ಹೊರಗಿನ ಆಲೆಯಲ್ಲಿ ದ್ರಾಕ್ಷಿಯ ಹಣ್ಣನ್ನು ಹಿಂಡಲಾಯಿತು. ಆ ಆಲೆಯಿಂದ ರಕ್ತವು ಹರಿಯಿತು. ಅದು ಮುನ್ನೂರು ಕಿಲೊಮೀಟರಿನಷ್ಟು ದೂರವಾಗಿಯೂ ಎರಡು ಮೀಟರಿನಷ್ಟು ಆಳವಾಗಿಯೂ ಹರಿಯಿತು.


ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು.


ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.


ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದುಕೊಂಡೆಯಾ?


ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II


ತನಗೆ ಬೇಕಾದ ರತ್ನಗಂಬಳಿಯನ್ನು ತಾನೆ ನೇಯ್ದಿದ್ದಾಳೆ; ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.


ನವಿರು ಜಾಲರಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು