Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:15 - ಕನ್ನಡ ಸತ್ಯವೇದವು C.L. Bible (BSI)

15 ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತ್ಯೆಚ್ಯಾ ತೊಂಡಾತ್ನಾ ಎಕ್ ಧಾರ್‍ಲೊ ಮೊಟೊ ಚಾಕು ಭಾಯ್ರ್ ಯೆಲೊ, ತ್ಯಾ ಚಾಕ್ವಾನಿ ತೊ ದೆಶಾಕ್ನಿ ಹಾರ್‍ವುನ್ ಟಾಕ್ತಾ. ತೊ ತೆಂಚ್ಯಾ ವರ್ತಿ ಲೊಂಗ್ಟಾಚ್ಯಾ ದಾಂಡ್ಯಾನಿ ರಾಜ್ ಚಾಲ್ವುತಾ, ಅನಿ ತೊ ಸಗ್ಳ್ಯಾನಿಕಿ ಮೊಟ್ಯಾ ದೆವಾಚ್ಯಾ ರಾಗಾಚ್ಯಾ ದ್ರಾಕ್ಷಿ ಮಳ್ತಲ್ಯಾ ಘಾನ್ಯಾಚ್ಯಾ ಖಡ್ಡ್ಯಾತ್ ಘಾಲುನ್ ತೊ ಚಿರ್ಡುನ್ ಸೊಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:15
15 ತಿಳಿವುಗಳ ಹೋಲಿಕೆ  

ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.


ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಇನ್ನುಳಿದವರು ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹೊರಟ ಖಡ್ಗದಿಂದ ಹತರಾದರು; ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಆಹಾರವಾದರು.


ಸರ್ವಜನಾಂಗಗಳನ್ನು ಕಬ್ಬಿಣದ ದಂಡದಿಂದ ಆಳಬಲ್ಲಂಥ ಒಂದು ಗಂಡುಮಗುವಿಗೆ ಆಕೆ ಜನ್ಮವಿತ್ತಳು. ಆದರೆ, ಆ ಮಗುವನ್ನು ಸಿಂಹಾಸನದಲ್ಲಿದ್ದ ದೇವರ ಬಳಿಗೆ ಕೊಂಡೊಯ್ಯಲಾಯಿತು.


ಆದುದರಿಂದ ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ಇಲ್ಲದಿದ್ದರೆ, ಬೇಗನೆ ನಿನ್ನ ಬಳಿಗೆ ಬರುತ್ತೇನೆ. ಬಂದು ನನ್ನ ಬಾಯಲ್ಲಿರುವ ಖಡ್ಗದಿಂದ ಅವರೊಡನೆ ಕಾದಾಡುತ್ತೇನೆ.


“ಪೆರ್ಗಮದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಹರಿತವಾದ ಇಬ್ಬಾಯಿಯ ಖಡ್ಗವುಳ್ಳವನು ನೀಡುವ ಸಂದೇಶವಿದು:


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಸ್ವಾಮಿಯ ಶೂರರೇ, ಕುಡುಗೋಲನ್ನು ಹಾಕಿರಿ; ಫಲ ಪಕ್ವವಾಗಿದೆ. ಬನ್ನಿ, ದ್ರಾಕ್ಷಿಯನ್ನು ತುಳಿಯಿರಿ; ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ರಾಷ್ಟ್ರಗಳ ದುಷ್ಟತನವು ಮಿತಿಮೀರಿದೆ.


ನಾನು ಬಂದು ಲೋಕವನ್ನು ಶಪಿಸಿ ನಾಶಗೊಳಿಸದಂತೆ ಆತನು ಹೆತ್ತವರ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ಹೆತ್ತವರ ಕಡೆಗೂ ಒಲಿಸಿ ಅವರನ್ನು ಒಂದಾಗಿಸುವನು.”


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು