Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:2 - ಕನ್ನಡ ಸತ್ಯವೇದವು C.L. Bible (BSI)

2 ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿ ಎರಡನೆಯ ಸಾರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನ ತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ನಮ್ಮ ದೇವರು ವೇಶ್ಯೆಯನ್ನು ದಂಡಿಸಿದನು. ಅವಳ ಲೈಂಗಿಕ ಪಾಪದಿಂದಲೇ ಲೋಕವು ಕೆಟ್ಟುಹೋಯಿತು. ಆತನು ತನ್ನ ಸೇವಕರ ರಕ್ತಕ್ಕೆ ಪ್ರತಿಯಾಗಿ ಆ ವೇಶ್ಯೆಯನ್ನು ದಂಡಿಸಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ತೆಚಿ ನಿರ್ನಯಾ ಸಮಾ ಅನಿ ಖರಿ ಹಾತ್! ತೆನಿ ಜಿಮ್ನಿ ವರ್ತಿ ಅಪ್ನಾಚ್ಯಾ ಬುರ್ಶ್ಯಾ ಚಾಲಿನ್ ವೆಭಿಚಾರಾಚೆ ಕಾಮ್ ಕರ್‍ತಲಿಕ್ ಚುಕಿದಾರ್ ಮನುನ್ ಠರ್‍ವುಲ್ಯಾನಾಯ್. ದೆವಾನ್ ತಿಕಾ ಶಿಕ್ಷಾ ಲಾವ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ತೆನಿ ತ್ಯೆಚ್ಯಾ ಸೆವಕಾಕ್ನಿ ಜಿವಾನಿ ಮಾರಲ್ಲಿನ್”, ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:2
16 ತಿಳಿವುಗಳ ಹೋಲಿಕೆ  

“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಪ್ರಭುವಿನ ಭೀತಿ ಪವಿತ್ರ; ಅದೆಂದಿಗೂ ಶಾಶ್ವತ I ಪ್ರಭುವಿನ ತೀರ್ಪು ಯಥಾರ್ಥ; ಪರಿಪೂರ್ಣ ನ್ಯಾಯಯುತ II


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಸರ್ವೇಶ್ವರನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿ ತೀರಿಸಿದಂತಾಗುವುದು.


ಆದರೆ (ದೇವರ) ನ್ಯಾಯಸಭೆ ತೀರ್ಪಿತ್ತು, ಅವನ ದೊರೆತನವನ್ನು ಕಿತ್ತು, ವಿನಾಶಮಾಡಿ, ಕೊನೆಗಾಣಿಸಿಬಿಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು