Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:5 - ಕನ್ನಡ ಸತ್ಯವೇದವು C.L. Bible (BSI)

5 ಬಳಿಕ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿ : “ದೇವರ ಎಲ್ಲಾ ದಾಸರೇ, ಅವರಲ್ಲಿ ಭಯಭಕ್ತಿಯುಳ್ಳ ಹಿರಿಯಕಿರಿಯರೇ, ನಮ್ಮ ದೇವರನ್ನು ಕೊಂಡಾಡಿ,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು - ದೇವರ ದಾಸರೆಲ್ಲರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಸಿಂಹಾಸನದಿಂದ ಒಂದು ಧ್ವನಿಯು ಬಂದಿತು. ಆ ಧ್ವನಿಯು, “ನಮ್ಮ ದೇವರ ಸೇವೆ ಮಾಡುವ ಜನರೆಲ್ಲರೇ, ಆತನಿಗೆ ಸ್ತೋತ್ರ ಮಾಡಿರಿ! ನಮ್ಮ ದೇವರಿಗೆ ಗೌರವ ನೀಡುವ ಚಿಕ್ಕವರೇ, ದೊಡ್ಡವರೇ, ಆತನಿಗೆ ಸ್ತೋತ್ರ ಮಾಡಿರಿ!” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಸ್ವರವು: “ದೇವರ ಎಲ್ಲಾ ದಾಸರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಸ್ತುತಿಸಿರಿ!” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಾನಾ ಸಿಂಹಾನಸಾಕ್ನಾ ಯೆಲ್ಲ್ಯಾ ಎಕ್ ಧನಾನ್, “ದೆವಾಚ್ಯಾ ಸಗ್ಳ್ಯಾ ಸೆವಕಾನೊ ಅನಿ ಸಗ್ಳ್ಯಾ ಲೊಕಾನು ಅನಿ ದೆವಾಕ್ ಭಿಂವ್ನ್ ಚಲ್ತಲ್ಯಾ ಮೊಟ್ಯಾನೊ ಅನಿ ಬಾರಿಕ್ಲ್ಯಾನೊ ಅಮ್ಚ್ಯಾ ದೆವಾಚಿ ಸುತ್ತಿ ಕರಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:5
14 ತಿಳಿವುಗಳ ಹೋಲಿಕೆ  

ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II


ಪ್ರಭುವನು ಸ್ತುತಿಸಲಿ ಉಸಿರಿರುವುದೆಲ್ಲವೂ I ಪ್ರಭುವಿಗೆ ಸ್ತೋತ್ರವಾಗಲಿ ಅಲ್ಲೆಲೂಯ! II


ಅಲ್ಲೆಲೂಯ I ಭಜಿಸಿರಿ, ಪ್ರಭುವಿನ ಶ್ರೀನಾಮವನು I ಭಜಿಸಿರಿ ಪ್ರಭುವಿನ ದಾಸರೆ, ಆತನನು II


‘ಇರುವರು ದೇವರ ಸಿಂಹಾಸನದ ಸಮ್ಮುಖದಲ್ಲೇ ಆರಾಧಿಪರಾತನನು ಹಗಲಿರುಳು ದೇವಾಲಯದಲ್ಲೇ ಸಂರಕ್ಷಿಪನಾತನು ಅವರನ್ನು ಗುಡಾರದಂತೆ.


ಮಣಿಯಿರಿ, ಪ್ರಭುವಿನಲಿ ಭಯಭಕುತಿಯುಳ್ಳವರೇ I ಭಜಿಸಿರಿ ಇಸ್ರಯೇಲರೇ, ಯಾಕೋಬ ಕುಲಜರೇ II


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ವಾಯುಮಂಡಲದ ಮೇಲೆ ಸುರಿದನು. ಆಗ ದೇವಾಲಯದ ಸಿಂಹಾಸನದ ಕಡೆಯಿಂದ ಒಂದು ದೊಡ್ಡ ಧ್ವನಿ ಉಂಟಾಗಿ, “ಮುಗಿಸಿದ್ದಾಯಿತು,” ಎಂದು ಹೇಳಿತು.


ಆಶೀರ್ವದಿಸುವನು ಪ್ರಭು ತನ್ನಲಿ ಭಯಭಕ್ತಿಯುಳ್ಳವರನು I ಚಿಕ್ಕವರು ದೊಡ್ಡವರೆನ್ನದೆ ಭಯಭಕ್ತಿಯುಳ್ಳವರನು II


ಹಿರಿಯ ಕಿರಿಯ, ಬಡವ ಬಲ್ಲಿದ, ದಾಸ ದಣಿ ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತಿನ ಹಚ್ಚೆ ಚುಚ್ಚಿಸಿಕೊಳ್ಳಬೇಕೆಂದು ಆ ಎರಡನೆಯ ಮೃಗ ಆಜ್ಞಾಪಿಸಿತು.


ರಾಜರುಗಳ ಮಾಂಸವನ್ನು, ಸೇನಾಧಿಪತಿಗಳ ಮಾಂಸವನ್ನು ಮತ್ತು ಪರಾಕ್ರಮಶಾಲಿಗಳ ಮಾಂಸವನ್ನು ತಿನ್ನ ಬನ್ನಿ; ಕುದುರೆಗಳ ಮಾಂಸವನ್ನೂ ರಾವುತರ ಮಾಂಸವನ್ನೂ ಉಣ ಬನ್ನಿ; ಯಜಮಾನರ, ಗುಲಾಮರ, ಚಿಕ್ಕವರ, ದೊಡ್ಡವರ ಈ ಎಲ್ಲಾ ನರಮಾನವರ ಮಾಂಸವನ್ನು ರುಚಿಸ ಬನ್ನಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು