Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:7 - ಕನ್ನಡ ಸತ್ಯವೇದವು C.L. Bible (BSI)

7 ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ ! ಆತನ ಮಹಿಮೆಯನು ಕೀರ್ತಿಸೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಜ್ಞದ ಕುರಿಯಾದಾತನ ವಿವಾಹ ಕಾಲವು ಬಂತು; ಆತನಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ; ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾವೆಲ್ಲರೂ ಆನಂದಿಸೋಣ ಮತ್ತು ಸಂತಸಪಡೋಣ! ದೇವರನ್ನು ಮಹಿಮೆಪಡಿಸೋಣ! ಕುರಿಮರಿಯಾದಾತನ (ಯೇಸು) ವಿವಾಹಕಾಲ ಬಂದಿರುವುದರಿಂದ ದೇವರನ್ನು ಘನಪಡಿಸೋಣ. ಕುರಿಮರಿಯಾದಾತನ ವಧು (ಸಭೆ) ತನ್ನನ್ನು ಸಿದ್ಧಪಡಿಸಿಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕುರಿಮರಿ ಆಗಿರುವವರ ವಿವಾಹ ಕಾಲವು ಬಂತು. ಅವರಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ. ಸಂತೋಷಪಡೋಣ, ಹರ್ಷಗೊಳ್ಳೋಣ, ಅವರನ್ನು ಮಹಿಮೆಪಡಿಸೋಣ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಮಿ ಸಂತೊಸ್ ಹೊವಾ, ಅನಿ ಖುಶಿ ಹೊವಾ; ತ್ಯೆಚ್ಯಾ ಮೊಟ್ಯಾಪಾನಾಚ್ಯಾ ವಿಶಯಾತ್ ಹೊಗ್ಳುವಾ! ಕಶ್ಯಾಕ್ ಮಟ್ಲ್ಯಾರ್ ಬೊಕ್ಡಾಚ್ಯಾ ಲಗ್ನಾಚೊ ಎಳ್ ಯೆವ್ನ್ ಪಾವ್ಲೊ, ಅನಿ ನ್ಹವ್ರಿ ಅಪ್ನಾಕುಚ್ ಲಗ್ನಾಕ್ ತಯಾರ್ ಕರುನ್ ಘೆವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:7
29 ತಿಳಿವುಗಳ ಹೋಲಿಕೆ  

ಏಳು ಅಂತಿಮ ವಿಪತ್ತುಗಳಿಂದ ತುಂಬಿದ್ದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ದೇವದೂತರುಗಳಲ್ಲಿ ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.


ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.


ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ.


ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.


ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆ ಎಂಬುದೇ ನನ್ನ ಅಭಿಪ್ರಾಯ.


ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.


ಕ್ರಿಸ್ತಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ, ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತಯೇಸುವೇ ಧರ್ಮಸಭೆಯ ಉದ್ಧಾರಕ.


“ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ.


ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧರಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದುರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಸಿಯೋನಿನ ಮಹಿಳೆಯರೇ, ಹೊರಟುಬನ್ನಿ ಅರಸ ಸೊಲೊಮೋನನನ್ನು ನೋಡಬನ್ನಿ ಆತನ ವಿವಾಹಮಹೋತ್ಸವ ದಿನದಂದು ಆತನ ತಾಯಿ ತೊಡಿಸಿದ ಮುಕುಟವನ್ನು ಆತ ಧರಿಸಿರುವುದನ್ನು ನೋಡಬನ್ನಿ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II


ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.


ಸಜ್ಜನರ ಅಧಿಕಾರದಿಂದ ಜನರಿಗೆ ನಲಿದಾಟ; ದುರ್ಜನರ ಆಳ್ವಿಕೆಯಿಂದ ಜನರಿಗೆ ನರಳಾಟ.


ಇದಕಂಡು ಹಿಗ್ಗುವರು ಸಜ್ಜನರೆಲ್ಲರು I ಬಾಯಿ ಮುಚ್ಚಿಕೊಳ್ಳುವರು ದುರ್ಜನರು II


ಸಿಯೋನ್ ಪಟ್ಟಣಿಗರು ಹರ್ಷಗೊಳ್ಳಲಿ I ಯೆಹೂದ್ಯ ನಗರಗಳು ಆನಂದಪಡಲಿ I ನಿನ್ನ ನ್ಯಾಯವನು ನೆನಪಿಸಿಕೊಳ್ಳಲಿ II


“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”


ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.


ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು