ಪ್ರಕಟನೆ 19:8 - ಕನ್ನಡ ಸತ್ಯವೇದವು C.L. Bible (BSI)8 ದಿವ್ಯವಾದುವು, ಭವ್ಯವಾದುವು, ಮೌಲ್ಯವಾದುವು, ಆಕೆಗಿತ್ತ ಉಡುಗೆತೊಡುಗೆಗಳು; ಸತ್ಕಾರ್ಯಗಳೇ ದೇವಜನರು ಧರಿಸುವ ಅಮೂಲ್ಯ ಉಡುಗೆತೊಡುಗೆಗಳು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿಸೋಣವಾಗಿತ್ತು. ಆ ನಾರುಮಡಿ ಅಂದರೆ ದೇವಜನರ ಸತ್ಕಾರ್ಯಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಯವಾದ ನಾರುಮಡಿಯನ್ನು ವಧುವಿಗೆ ಧರಿಸಲು ನೀಡಲಾಗಿತ್ತು. ಆ ನಾರುಮಡಿಯು ಪ್ರಕಾಶಮಾನವಾಗಿತ್ತು ಹಾಗೂ ಶುಭ್ರವಾಗಿತ್ತು.” (ನಯವಾದ ನಾರುಮಡಿಯೆಂದರೆ ದೇವರ ಪರಿಶುದ್ಧ ಜನರು ಮಾಡಿದ ಒಳ್ಳೆಯ ಕಾರ್ಯಗಳು ಎಂದರ್ಥ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ತೊಟ್ಟುಕೊಳ್ಳುವುದಕ್ಕೆ ಆಕೆಗೆ ಅನುಗ್ರಹಿಸಲಾಗಿತ್ತು. ಏಕೆಂದರೆ ಆ ನಾರುಮಡಿಯು ಪರಿಶುದ್ಧರ ನೀತಿಕೃತ್ಯಗಳೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಹೊಳ್ವುತಲೆ ಪವಿತ್ರ್ ಹೊತ್ತೆ ಕಿಮ್ತಿಚೆ ಕಪ್ಡೆ ತಿಕಾ ನೆಸುಕ್ ದಿಲ್ಲೆ ಹೊತ್ತೆ”, ತೆ ಕಿಮ್ತಿಚೆ ಕಪ್ಡೆ ಮಟ್ಲ್ಯಾರ್ ದೆವಾಚ್ಯಾ ಲೊಕಾನಿ ಕರಲ್ಲಿ ಬರಿ ಕಾಮಾ. ಅಧ್ಯಾಯವನ್ನು ನೋಡಿ |