ಪ್ರಕಟನೆ 19:9 - ಕನ್ನಡ ಸತ್ಯವೇದವು C.L. Bible (BSI)9 ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಅವನು ನನ್ನ ಸಂಗಡ ಮಾತಾಡುತ್ತಾ - ಯಜ್ಞದ ಕುರಿಯಾದಾತನ ವಿವಾಹದ ಔತಣಕ್ಕೆ ಕರಸಿಕೊಂಡವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿ - ಈ ಮಾತುಗಳು ದೇವರ ಸತ್ಯವಚನಗಳಾಗಿವೆ, ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ದೇವದೂತನು ನನಗೆ ಹೀಗೆ ಹೇಳಿದನು: “ಈ ರೀತಿ ಬರೆ: ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟ ಜನರು ಧನ್ಯರು!” ನಂತರ ದೇವದೂತನು, “ಇವು ದೇವರ ಸತ್ಯವಾದ ನುಡಿಗಳು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತನ್ನಾ ದೆವಾಚ್ಯಾ ದುತಾನ್ ಮಾಕಾ, “ಹೆ ಲಿವ್; ಜೆ ಕೊನಾಕ್ ಬೊಕ್ಡಾಚ್ಯಾ ಲಗ್ನಾಚ್ಯಾ ಸನಾಕ್ ಬಲ್ವನ್ ಗಾವ್ಲಾ, ತೆನಿ ಕವ್ಡೆ ಸುಖಿ. ದೆವಾಚ್ಯಾ ದುತಾನ್ ಹೆಬಿ ಮಿಳ್ವುಲ್ಯಾನ್ ಅನಿ, ಹ್ಯಾ ದೆವಾಚ್ಯಾ ಗೊಸ್ಟಿಯಾ ಖರ್‍ಯಾ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |