Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:10 - ಕನ್ನಡ ಸತ್ಯವೇದವು C.L. Bible (BSI)

10 ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತುಮ್ಕಾ ಕಸ್ಟ್ ಸೊಸುಕ್ ಪಾಜೆ ಮನುನ್ ತುಮಿ ಭಿಂವ್ನಕಾಶಿ.ಆಯ್ಕಾ! ತುಮ್ಚ್ಯಾತ್ಲ್ಯಾ ಉಲ್ಲ್ಯಾಕ್ನಿ ಬಂದಿಖಾನ್ಯಾತ್ ಘಾಲಿ ಸರ್ಕೆ ಕರುನ್ ಗಿರೊ ತುಮ್ಚಿ ಪರಿಕ್ಷಾ ಕರ್ತಾ ಅನಿ ಧಾ ದಿಸಾತ್ನಿ ಮಟ್ಲ್ಯಾರ್ ತುಮ್ಚೊ ತರಾಸಾಚೊ ಎಳ್ ಸರ್ತಾ. ಮರಿ ಪತರ್‍ಬಿ ತುಮಿ ಮಾಕಾ ವಿಶ್ವಾಸಾನ್ ರ್‍ಹಾವಾ ಅನಿ ಜಿಕಲ್ಲ್ಯಾಚೆ ಮುಕುಟ್ ಮನುನ್ ಜಿವ್ ಮಿಯಾ ತುಮ್ಕಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:10
36 ತಿಳಿವುಗಳ ಹೋಲಿಕೆ  

ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ನೀವು ನನ್ನವರು. ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.


ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ಆದರೆ ಕೊನೆಯವರೆಗೂ ಸ್ಥಿರವಾಗಿರುವವರು ಜೀವೋದ್ಧಾರವನ್ನು ಹೊಂದುವರು.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ವಿಚಾರಕನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನದವರೆಗೆ ಪರೀಕ್ಷಿಸಿದನು.


ಇದಲ್ಲದೆ, ದೇವಜನರ ವಿರುದ್ಧ ಯುದ್ಧಮಾಡಿ, ಜಯಗಳಿಸುವಂತೆ ಅದಕ್ಕೆ ಅವಕಾಶವನ್ನು ಕೊಡಲಾಯಿತು. ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಮೇಲೆ ಅದಕ್ಕೆ ಅಧಿಕಾರವನ್ನು ನೀಡಲಾಯಿತು.


ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ತನ್ನ ಪ್ರಾಣವನ್ನು ಈ ಲೋಕದಲ್ಲಿ ದ್ವೇಷಿಸುವವನು ಅದನ್ನು ನಿತ್ಯಜೀವಕ್ಕಾಗಿ ಕಾಯ್ದಿರಿಸಿಕೊಳ್ಳುತ್ತಾನೆ.


ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು.


ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


“ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಮ್ಮನ್ನು ಪರೀಕ್ಷಿಸಿನೋಡು. ಸೇವಕರಾದ ನಮಗೆ ಭೋಜನಕ್ಕೆ ಬದಲಾಗಿ ಕಾಯಿಪಲ್ಯ, ಪಾನಕ್ಕೆ ಬದಲಾಗಿ ನೀರು ಒದಗಿಸಿದರೆ ಸಾಕು.


ನಾನು ಕಂಡ ಆ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತಿದ್ದವು. ಬಾಯಿಯು, ಸಿಂಹದ ಬಾಯಂತೆ ಇತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಅಪಾರ ಅಧಿಕಾರವನ್ನೂ ಕೊಟ್ಟಿತು.


ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಯೂದನು ಅದನ್ನು ತೆಗೆದುಕೊಂಡದ್ದೇ ತಡ, ಸೈತಾನನು ಅವನನ್ನು ಹೊಕ್ಕನು.


ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ಮೊದಲನೆಯ ಮೃಗದ ಎದುರಿನಲ್ಲಿ ಪವಾಡಗಳನ್ನೆಸಗುವ ಅನುಮತಿ ಇದ್ದುದರಿಂದ ಅದು ಭೂನಿವಾಸಿಗಳನ್ನು ಮರುಳುಗೊಳಿಸಿತು. ಖಡ್ಗದಿಂದ ಗಾಯಗೊಂಡಿದ್ದರೂ ಸಾಯದೆ ಬದುಕಿದ್ದ ಮೃಗದ ಗೌರವಾರ್ಥ ಒಂದು ವಿಗ್ರಹವನ್ನು ನಿರ್ಮಿಸಬೇಕೆಂದು ಭೂನಿವಾಸಿಗಳಿಗೆ ಅದು ವಿಧಿಸಿತು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ನಿನ್ನನ್ನು ಕೂಗಿಕೊಂಡಾಗ ಸಮೀಪಕ್ಕೆ ಬಂದೆ “ಭಯಪಡಬೇಡ” ಎಂದು ಅಭಯನೀಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು