ಪ್ರಕಟನೆ 2:13 - ಕನ್ನಡ ಸತ್ಯವೇದವು C.L. Bible (BSI)13 ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ. ಅಧ್ಯಾಯವನ್ನು ನೋಡಿ |