Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:16 - ಕನ್ನಡ ಸತ್ಯವೇದವು C.L. Bible (BSI)

16 ಆದುದರಿಂದ ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ಇಲ್ಲದಿದ್ದರೆ, ಬೇಗನೆ ನಿನ್ನ ಬಳಿಗೆ ಬರುತ್ತೇನೆ. ಬಂದು ನನ್ನ ಬಾಯಲ್ಲಿರುವ ಖಡ್ಗದಿಂದ ಅವರೊಡನೆ ಕಾದಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಿಂದ ಹೊರಬರುವ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದದರಿಂದ ದೇವರ ಕಡೆಗೆ ತಿರುಗಿಕೋ, ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ನಿನ್ನ ಮನಸ್ಸನ್ನು ಪರಿವರ್ತಿಸಿಕೊ! ಇಲ್ಲವಾದರೆ, ನಾನು ತ್ವರಿತವಾಗಿ ನಿನ್ನಲ್ಲಿಗೆ ಬಂದು, ನನ್ನ ಬಾಯಿಂದ ಹೊರಗೆ ಬರುವ ಖಡ್ಗದಿಂದ ಆ ಜನರ ವಿರುದ್ಧ ಹೋರಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ನೀನು ದೇವರ ಕಡೆಗೆ ತಿರುಗಿಕೋ! ಇಲ್ಲದಿದ್ದರೆ ನಾನು ಶೀಘ್ರವೇ ನಿನ್ನ ಬಳಿಗೆ ಬಂದು ನನ್ನ ಇಬ್ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅತ್ತಾ ತುಮಿ ಪಾಪ್ ಕರ್ತಲೆ ಸೊಡುನ್ ಸೊಡಾ! ತುಮಿ ಅಸೆ ಕರಿನಸ್ಲ್ಯಾರ್ ಮಿಯಾ ಲಗ್ಗುನಾಚ್ ತುಮ್ಚ್ಯಾಕ್ಡೆ ಯೆತಾ ಅನಿ ಮಾಜ್ಯಾತೊಂಡಾತ್ನಾ ಯೆತಲೊ ಕೊಯ್ತೊ ಘೆವ್ನ್ ಮಿಯಾ ತ್ಯಾ ಲೊಕಾಂಚ್ಯಾ ವಾಂಗ್ಡಾ ಮಾರಾಮಾರಿ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:16
15 ತಿಳಿವುಗಳ ಹೋಲಿಕೆ  

ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.


ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುತ್ತೇನೆ.


ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿ; ಪವಿತ್ರಾತ್ಮರ ಕೊಡುಗೆಯಾದ ದೇವರ ವಾಕ್ಯವು ನಿಮಗೆ ಖಡ್ಗವಾಗಿರಲಿ.


ಇನ್ನುಳಿದವರು ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹೊರಟ ಖಡ್ಗದಿಂದ ಹತರಾದರು; ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಆಹಾರವಾದರು.


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


“ಪೆರ್ಗಮದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಹರಿತವಾದ ಇಬ್ಬಾಯಿಯ ಖಡ್ಗವುಳ್ಳವನು ನೀಡುವ ಸಂದೇಶವಿದು:


ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


“ಯೇಸುಸ್ವಾಮಿ ನುಡಿಯುವುದನ್ನು ಕೇಳು : ‘ಇಗೋ ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.


ಮನುಷ್ಯರು ಆ ಕಡು ಕಾವಿನಲ್ಲಿ ಬೆಂದು ನರಳಿದರು. ಈ ಮಾರಕ ವ್ಯಾಧಿಗಳ ಮೇಲೆ ಅಧಿಕಾರ ಇದ್ದ ದೇವರನ್ನೂ ದೂಷಿಸಿದರು. ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾಗಲಿಲ್ಲ; ಅವರ ಮಹಿಮೆಯನ್ನು ಸ್ತುತಿಸಲಿಲ್ಲ.


ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು