Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:18 - ಕನ್ನಡ ಸತ್ಯವೇದವು C.L. Bible (BSI)

18 “ಥುವತೈರದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಪ್ರಜ್ವಲಿಸುವ ಬೆಂಕಿಯ ಕೆಂಡದಂಥ ಕಣ್ಣುಗಳುಳ್ಳವನೂ ತಾಮ್ರದಂತಿರುವ ಪಾದಗಳುಳ್ಳವನೂ ಆದ ದೇವಪುತ್ರನ ಸಂದೇಶವಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಥುವತೈರದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ದೇವಕುಮಾರನು ಈ ಸಂಗತಿಗಳನ್ನು ಹೇಳುತ್ತಾನೆ. ಬೆಂಕಿಯ ಉರಿಯಂತೆ ಪ್ರಜ್ವಲಿಸುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳೂ ಇರುವಾತನು, ನಿನಗೆ ಇವುಗಳನ್ನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಥುವತೈರದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಪುತ್ರ ಆಗಿರುವವರು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಥೈಟಿರಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ದೆವಾಚ್ಯಾ ಲೆಕಾಕ್ನಾ ಅನಿ ಪೆಟ್ತಲ್ಯಾ ಆಗಿ ಸರ್ಕೆ ಡೊಳೆ ಅನಿ ಪವಿತ್ರ್ ಕರಲ್ಲ್ಯಾ ಪಿತ್ಳಿ ತಾಂಬ್ಯಾಚ್ಯಾ ಸಾರ್ಕೆ ಹೊಳ್ವಳ್ತಲೆ ಪಾಂಯೆ ಅಸಲ್ಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:18
22 ತಿಳಿವುಗಳ ಹೋಲಿಕೆ  

ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?


ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.


ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು.


ಅವನ ಶರೀರ ಸುವರ್ಣರತ್ನದ ಹಾಗೆ ಕಂಗೊಳಿಸಿತು. ಅವನ ಮುಖ ಮಿಂಚಿನಂತೆ ಹೊಳೆಯಿತು. ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ಫಳಫಳಿಸಿದವು. ಅವನ ಕೈಕಾಲುಗಳು ಬೆಳಗಿದ ಕಂಚಿನ ಹಾಗೆ ಥಳಥಳಿಸಿದವು. ಅವನ ಮಾತಿನ ಶಬ್ದ ಜನಸಂದಣಿಯ ಕೋಲಾಹಲದಂತಿತ್ತು.


ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.


“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ: ಈ ದುರ್ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ‘ಸೈತಾನನ ಗೂಢ ರಹಸ್ಯಗಳು’ ಎನ್ನಲಾಗುವ ಈ ವಿಷಯಗಳನ್ನು ನೀವು ಅರಿತುಕೊಳ್ಳಲಿಲ್ಲ. ನಿಮ್ಮ ಮೇಲೆ ಹೆಚ್ಚಿನ ಹೊರೆಯನ್ನು ಹೊರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು