Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:19 - ಕನ್ನಡ ಸತ್ಯವೇದವು C.L. Bible (BSI)

19 ನಿನ್ನ ಸುಕೃತ್ಯಗಳನ್ನು ನಾನು ಬಲ್ಲೆ. ನಿನ್ನ ಪ್ರೀತಿ ವಿಶ್ವಾಸಗಳು ನನಗೆ ತಿಳಿದಿವೆ. ನಿನ್ನ ಸೇವೆ ಸಹಿಷ್ಣುತೆಗಳನ್ನು ಮನಗಂಡಿದ್ದೇನೆ. ನಿನ್ನ ಇತ್ತೀಚಿನ ಕಾರ್ಯಗಳು ನಿನ್ನ ಹಿಂದಿನ ಕಾರ್ಯಗಳಿಗಿಂತಲೂ ಮೇಲಾದುವೆಂದು ನನಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಬೆಂಕಿಯ ಉರಿಯಂತಿರುವ ಕಣ್ಣುಗಳೂ ತಾಮ್ರದಂತಿರುವ ಪಾದಗಳೂ ಉಳ್ಳ ದೇವಕುಮಾರನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನೂ ನಿನ್ನ ಪ್ರೀತಿಯನ್ನೂ ನಂಬಿಕೆಯನ್ನೂ ಪರೋಪಕಾರವನ್ನೂ ತಾಳ್ಮೆಯನ್ನೂ ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಪ್ರೀತಿ, ನಂಬಿಕೆ, ಸೇವೆ ಮತ್ತು ತಾಳ್ಮೆಗಳು ನನಗೆ ತಿಳಿದಿವೆ. ಈಗ ನೀನು ಮೊದಲಿಗಿಂತ ಹೆಚ್ಚಿಗೆ ಮಾಡುತ್ತಿರುವುದನ್ನೂ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ನಿನ್ನ ಕ್ರಿಯೆಗಳನ್ನೂ ನಿನ್ನ ಪ್ರೀತಿಯನ್ನೂ ನಂಬಿಕೆಯನ್ನೂ ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ನೀನು ಮೊದಲು ಮಾಡಿದ್ದಕ್ಕಿಂತಲೂ ಈಗ ಹೆಚ್ಚಾಗಿ ಮಾಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತುಮಿ ಕಾಯ್ ಕರ್ತ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ತುಮ್ಚೊ ಪ್ರೆಮ್, ತುಮ್ಚೊ ವಿಶ್ವಾಸ್, ತುಮ್ಚಿ ಸೆವಾ, ಅನಿ ತುಮಿ ಸೊಸುನ್ ಘೆವ್ನ್ ಜಾತಲೆ ತೆ ಸಗ್ಳೆ ಮಾಕಾ ಗೊತ್ತ್ ಹಾಯ್. ಪಯ್ಲೆಚ್ಯಾನ್ಕಿಬಿ ಜಾಸ್ತಿಚೆಚ್ ತುಮಿ ಹೆ ಸಗ್ಳೆ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:19
16 ತಿಳಿವುಗಳ ಹೋಲಿಕೆ  

ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆಂದರೆ, ಪ್ರೀತಿ ಅಸಂಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ.


ನಿಮ್ಮನ್ನು ಸಂದರ್ಶಿಸಿದ ನಂತರ ತಿಮೊಥೇಯನು ಹಿಂದಿರುಗಿದ್ದಾನೆ. ನಿಮ್ಮ ವಿಶ್ವಾಸ ಮತ್ತು ಪ್ರೀತಿಯ ಬಗ್ಗೆ ಶುಭವರ್ತಮಾನವನ್ನು ತಂದಿದ್ದಾನೆ. ನಾವು ನಿಮ್ಮನ್ನು ಕಾಣಲು ಬಯಸುವಂತೆ, ನೀವೂ ನಮ್ಮನ್ನು ನೋಡಲು ಹಾತೊರೆಯುತ್ತಿರುವಿರೆಂದು ಮತ್ತು ನಮ್ಮನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿರುವಿರೆಂದು ತಿಳಿಸಿದ್ದಾನೆ.


ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯೇ ಸಮಸ್ತವನ್ನು ಸಂಪೂರ್ಣಗೊಳಿಸುವ ಬಂಧನ.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ತನ್ನ ಯಾಜಕ ಸೇವಾಸರದಿಯು ಮುಗಿದ ನಂತರ ಜಕರೀಯನು ಮನೆಗೆ ಹಿಂದಿರುಗಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು