ಪ್ರಕಟನೆ 2:2 - ಕನ್ನಡ ಸತ್ಯವೇದವು C.L. Bible (BSI)2 ನಾನು ನಿನ್ನ ಸುಕೃತ್ಯಗಳನ್ನು ಬಲ್ಲೆ. ನಿನ್ನ ಶ್ರಮಜೀವನವನ್ನು ಅರಿತು ಇದ್ದೇನೆ. ನಿನ್ನ ಸಹನಾಶಕ್ತಿಯನ್ನು ಮನಗಂಡಿದ್ದೇನೆ. ದುರ್ಜನರನ್ನು ನೀನು ಸಹಿಸಲಾರೆ ಎಂಬುದು ನನಗೆ ಗೊತ್ತು. ಪ್ರೇಷಿತರಲ್ಲದಿದ್ದರೂ ಪ್ರೇಷಿತರೆಂದು ಹೇಳಿಕೊಳ್ಳುವವರನ್ನು ನೀನು ಪರಿಶೋಧಿಸಿರುವೆ. ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿನ್ನ ಕೃತ್ಯಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ಪ್ರಯಾಸ, ಸಹನೆಯನ್ನು ಬಲ್ಲೆನು. ನೀನು ದುಷ್ಟರನ್ನು ಸಹಿಸಲಾರೆ. ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತಿಯಾ ಕಾಯ್-ಕಾಯ್ ಕರ್‍ಲೆ ಮನುನ್ ಮಾಕಾ ಗೊತ್ತ್ ಹಾಯ್. ತಿಯಾ ಕವ್ಡೆ ಸೊಸುನ್ ಘೆವ್ನ್ ಕವ್ಡ್ಯಾ ತರಾಸಾನ್ ಕಾಮ್ ಕರ್‍ಲೆ ಮನುನ್ ಮಾಕಾ ಗೊತ್ತ್ ಹಾಯ್, ಬುರ್ಶಿ ಲೊಕಾ ಮಟ್ಲ್ಯಾರ್ ತುಕಾ ಸೊಸುನ್ ಘೆವ್ಕ್ ಹೊಯ್ನಾ, ಅನಿ ಅಪ್ನಿ ಅಪೊಸ್ತಲಾ ಮನುನ್ ಸಾಂಗ್ತಲ್ಯಾಂಚಿ ತಿಯಾ ಪರಿಕ್ಷಾ ಕರುನ್ ಬಗಟ್ಲೆ, ಅನಿ ತೆನಿ ಅಪೊಸ್ತಲಾ ನ್ಹಯ್ ಝುಟಿ ಲೊಕಾ ಮನುನ್ ದಾಕ್ವುನ್ ದಿಲೆ. ಅಧ್ಯಾಯವನ್ನು ನೋಡಿ |