Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:22 - ಕನ್ನಡ ಸತ್ಯವೇದವು C.L. Bible (BSI)

22 ಇಗೋ ನೋಡು, ಅವಳು ರೋಗದಿಂದ ಹಾಸಿಗೆ ಹಿಡಿಯುವಂತೆ ಮಾಡುತ್ತೇನೆ. ಅವಳೊಡನೆ ವ್ಯಭಿಚಾರ ಮಾಡುವವರು ಅವಳ ದುಷ್ಕೃತ್ಯಗಳನ್ನು ತ್ಯಜಿಸಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗದೆಹೋದರೆ, ಅವರು ಭೀಕರ ಕಷ್ಟನಷ್ಟಗಳಿಗೆ ಗುರಿಯಾಗುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಗೋ, ಅವಳು ಹಾಸಿಗೆಯ ಮೇಲೆ ಬಿದ್ದುಕೊಂಡಿರುವಂತೆ ಮಾಡುವೆನು, ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಮನಸ್ಸನ್ನು ದೇವರ ಕಡಗೆ ತಿರುಗಿಸಿಕೊಂಡು ಅವಳ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆದ್ದರಿಂದ ಆಕೆಯು ಮಹಾಸಂಕಟಪಡುತ್ತಾ ಹಾಸಿಗೆಯ ಮೇಲೆ ಬಿದ್ದಿರುವಂತೆ ಮಾಡುತ್ತೇನೆ. ಅವಳ ಜೊತೆಯಲ್ಲಿ ಲೈಂಗಿಕ ಪಾಪ ಮಾಡುವ ಜನರೆಲ್ಲರೂ ಮಹಾಸಂಕಟವನ್ನು ಅನುಭವಿಸುತ್ತಾರೆ. ಅವಳು ಮಾಡುವ ಕಾರ್ಯಗಳಿಗೆ ಅವರು ವಿಮುಖರಾಗದಿದ್ದರೆ ನಾನು ಇದನ್ನು ಈಗಲೇ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇಗೋ, ಅವಳು ಹಾಸಿಗೆಯಲ್ಲಿ ಬಾಧೆಯಿಂದ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಪಶ್ಚಾತ್ತಾಪಪಟ್ಟು ತಮ್ಮ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ, ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಚೆಸಾಟ್ನಿ ಮಿಯಾ ತಿಕಾ ಸಿಕ್ ಹೊವ್ನ್ ಹಾತ್ರಾನಾತ್ ಪಡಿಸರ್ಕೆ ಕರ್ತಾ. ಥೈ ತಿ ಅನಿ ತಿಚ್ಯಾ ವಾಂಗ್ಡಾ ವೆಭಿಚಾರ್ ಕರ್‍ತಲ್ಲ್ಯಾಕ್ನಿ ಮೊಟೊ ಸಂಕಟ್ ಹೊತ್ತಾ.ತೆಚೊ ಮನ್ ಬದ್ಲುಕ್ ನಸಲ್ಲ್ಯಾರ್ ಮಿಯಾ ಹೆ ಅತ್ತಾಚ್ ಕರ್ತಾ. ಸಮಂದ್ ಥವ್ನ್ ಘೆಟಲ್ಲೆ ತರಾಸ್ ಕರುನ್ ಘೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:22
16 ತಿಳಿವುಗಳ ಹೋಲಿಕೆ  

ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.


ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು.


ಬಹುಶಃ, ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನಾದರು ಕೇಳಿ ತಮ್ಮ ದುರ್ಮಾರ್ಗಗಳನ್ನು ಬಿಟ್ಟು ಹಿಂದಿರುಗಬಹುದು. ಹಿಂದಿರುಗಿದರೆ, ಅವರ ಪಾಪಾಪರಾಧಗಳನ್ನು ಕ್ಷಮಿಸಿಬಿಡುವೆನು.”


ಅವಳೊಡನೆ ವ್ಯಭಿಚಾರಮಾಡಿದ ಹಾಗೂ ಭೋಗವಿಲಾಸದಿಂದ ಬಾಳಿದ ಭೂರಾಜರು ಅವಳನ್ನು ದಹಿಸುವ ಚಿತೆಯಿಂದ ಮೇಲೇರುವ ದಟ್ಟ ಹೊಗೆಯನ್ನು ದಿಟ್ಟಿಸಿ ನೋಡಿ ಶೋಕಿಸುವರು.


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ.


ಅವರ ಕೈಗೆ ನಿನ್ನನ್ನು ನಾನು ಒಪ್ಪಿಸುವೆನು. ಅವರು ನಿನ್ನಲ್ಲಿ ಹಗೆ ತೀರಿಸಿಕೊಳ್ಳುವರು. ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಹಾದರವು, ಹೌದು, ನಿನ್ನ ಲಂಪಟತನ ಹಾಗು ಸೂಳೆತನ ಬಯಲಿಗೆ ಬರುವುವು.


ಇದರಿಂದಲಾದರೂ ಜೆರುಸಲೇಮ್ ನಗರ ನನಗೆ ಭಯಪಡುವುದು, ನಾನು ಕಲಿಸಿದ ಪಾಠವನ್ನು ಎಂದಿಗೂ ಮರೆಯದು’ ಎಂದುಕೊಂಡೆ. ಆದರೆ ಅದರ ನಿವಾಸಿಗಳು ತಮ್ಮ ನಡತೆಯನ್ನು ಕೆಡಿಸಿಕೊಳ್ಳಲು ಮತ್ತಷ್ಟು ಕಾತರರಾದರು.”


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.


ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು