Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:3 - ಕನ್ನಡ ಸತ್ಯವೇದವು C.L. Bible (BSI)

3 ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿವಿುತ್ತ ಬಾಧೆಯನ್ನು ಸೈರಿಸಿಕೊಂಡು ಬೇಸರಗೊಳ್ಳಲಿಲ್ಲ; ಇದನ್ನೆಲ್ಲಾ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ತಾಳ್ಮೆಯಿಂದ ಸತತವಾಗಿ ಪ್ರಯತ್ನಿಸುತ್ತಿರುವೆ; ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಬೇಸರಪಡದೆ ಸಹಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ತಾಳ್ಮೆಯಿಂದ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡು ಬೇಸರಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಿಯಾ ಲೈ ಸೊಸುನ್ ಘೆವ್ನ್ ಹಾಸ್, ಮಾಕಾ ಲಾಗುನ್ ತಿಯಾ ಲೈ ಕಸ್ಟ್ ಕಾಡ್ಲೆಯ್. ಜಾಲ್ಯಾರ್‍ಬಿ ತಿಯಾ ಮಾಕಾ ಸೊಡುನ್ ಜಾವ್ಕನೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:3
49 ತಿಳಿವುಗಳ ಹೋಲಿಕೆ  

ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು.


ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಅಂತೆಯೇ, ಅಬ್ರಹಾಮನು ದೀರ್ಘಕಾಲ ಕಾದಿದ್ದು ದೇವರ ವಾಗ್ದಾನದ ಫಲವನ್ನು ಪಡೆದನು.


ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಸಕಲ ಮಾನವರ, ವಿಶೇಷವಾಗಿ ಕ್ರೈಸ್ತವಿಶ್ವಾಸಿಗಳ, ಉದ್ಧಾರಕರಾದ ಜೀವಸ್ವರೂಪ ದೇವರಲ್ಲಿಯೇ ನಾವು ಭರವಸೆಯಿಟ್ಟಿದ್ದೇವೆ; ಅದಕ್ಕಾಗಿಯೇ ನಾವು ಹೋರಾಡುತ್ತೇವೆ ಹಾಗೂ ಶ್ರಮಿಸುತ್ತೇವೆ.


ನೀವಾದರೋ ಸಹೋದರರೇ, ಸತ್ಕಾರ್ಯದ ಸಾಧನೆ ಸಾಕಾಯಿತೆಂದು ಹೇಳಿದಿರಿ.


ಹೀಗಿರಲು, ನಾವು ಎದೆಗುಂದುವುದಿಲ್ಲ. ನಮ್ಮ ಭೌತಿಕ ದೇಹವು ನಶಿಸುತ್ತಿದ್ದರೂ ನಮ್ಮ ಅಂತರಂಗವು ದಿನೇದಿನೇ ನೂತನವಾಗುತ್ತದೆ.


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಪ್ರತ್ಯಕ್ಷವಾಗದೆ ಇರುವುದನ್ನು ನಾವು ನಿರೀಕ್ಷಿಸುವವರಾಗಿದ್ದರೆ, ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.


ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬರದವನು ನನ್ನ ಶಿಷ್ಯನಾಗಲಾರನು.


ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ಸುಜ್ಞಾನಕ್ಕೆ ಸಂಯಮವನ್ನು, ಸಂಯಮಕ್ಕೆ ಸ್ಥೈರ್ಯವನ್ನು, ಸ್ಥೈರ್ಯಕ್ಕೆ ಸದ್ಭಕ್ತಿಯನ್ನು ಕೂಡಿಸಿರಿ.


ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ಈ ಕಾರಣ, ಇಲ್ಲಾದರೂ ಸರಿ, ಅಲ್ಲಾದರೂ ಸರಿ, ಪ್ರಭು ಮೆಚ್ಚುವಂತೆ ಬಾಳುವುದೊಂದೇ ನಮ್ಮ ಗುರಿ.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.


ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು.


ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ.


ದೇವರ ಪ್ರೀತಿಯನ್ನೂ ಕ್ರಿಸ್ತಯೇಸುವಿನ ಸಹನೆಯನ್ನೂ ನೀವು ಕಲಿತುಕೊಳ್ಳುವಂತೆ, ಪ್ರಭುವೇ ನಿಮ್ಮ ಅಂತರಂಗವನ್ನು ಬೆಳಗಿಸಲಿ.


ಸಹೋದರರೇ, ನಮ್ಮ ಶ್ರಮೆ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಹೀಗೆ ನೀವು ನಡೆದುಕೊಂಡರೆ ನನ್ನ ಸೇವೆ ವ್ಯರ್ಥವಾಗದೆ, ಶ್ರಮೆ ನಿಷ್ಫಲವಾಗದೆ, ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆಪಡಬಹುದು.


ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.


ಇತರರ ಪ್ರಯಾಸದ ಫಲಗಳನ್ನು ನಮ್ಮದೆಂದುಕೊಂಡು ಎಲ್ಲೆಮೀರಿ ನಾವು ಹೊಗಳಿಕೊಳ್ಳುತ್ತಿಲ್ಲ. ಆದರೆ ನಿಮ್ಮ ವಿಶ್ವಾಸ ವೃದ್ಧಿಯಾದಂತೆಲ್ಲಾ ನಮ್ಮ ಕಾರ್ಯಕ್ಷೇತ್ರ ಇನ್ನೂ ವಿಸ್ತಾರವಾಗಬೇಕು.


ಏಟುಪೆಟ್ಟುಗಳನ್ನು ತಿಂದಿದ್ದೇವೆ, ಸೆರೆಮನೆವಾಸ ಅನುಭವಿಸಿದ್ದೇವೆ, ಕೋಪಕ್ರಾಂತಿಗಳಿಗೆ ಗುರಿಯಾಗಿದ್ದೇವೆ, ಮೈಮುರಿಯೆ ದುಡಿದಿದ್ದೇವೆ, ನಿದ್ದೆಗೆಟ್ಟು ಬಳಲಿದ್ದೇವೆ, ಊಟವಿಲ್ಲದೆ ಸೊರಗಿದ್ದೇವೆ.


ಪ್ರಭು ಸೇವೆಯಲ್ಲಿ ನಿರತರಾದ ತ್ರುಫೈನಳಿಗೂ ತ್ರುಫೋಸಳಿಗೂ ಮತ್ತು ಪ್ರಭುವಿಗಾಗಿ ಶ್ರದ್ಧೆಯಿಂದ ಸೇವೆಸಲ್ಲಿಸಿದ ಪ್ರಿಯ ಪೆರ್ಸಿಸಳಿಗೂ ನನ್ನ ನೆನಕೆಗಳು.


ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.


ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಈತನು ಅಲೆಕ್ಸಾಂಡರ್ ಹಾಗೂ ರೂಫ ಎಂಬವರ ತಂದೆ. ಯೇಸುಸ್ವಾಮಿಯ ಶಿಲುಬೆಯನ್ನು ಹೊರುವಂತೆ ಸೈನಿಕರು ಅವನನ್ನು ಬಲವಂತಮಾಡಿದರು.


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


ನಿನಗಾಗಿಯೇ ನಾ ನಿಂದೆಗೊಳಗಾದೆನಯ್ಯಾ I ನಾಚಿಕೆಯಿಂದಲೆ ಮುಖ ಮುಚ್ಚಿಕೊಂಡೆನಯ್ಯಾ II


ಸಹೋದರರೇ, ನಿಮ್ಮೊಡನೆ ದುಡಿಯುತ್ತಾ ಪ್ರಭುವಿನ ಹೆಸರಿನಲ್ಲಿ ನಿಮಗೆ ಅಧಿಕಾರಿಗಳೂ ಮಾರ್ಗದರ್ಶಕರೂ ಆಗಿರುವವರಿಗೆ ತಕ್ಕ ಸನ್ಮಾನವನ್ನು ಸಲ್ಲಿಸಿರಿ.


ಇಂಥವರನ್ನು ಮತ್ತು ಅವರೊಡನೆ ದುಡಿದು ಸೇವೆಮಾಡುವವರನ್ನು ಮುಂದಾಳುಗಳೆಂದು ಸನ್ಮಾನಿಸಿರಿ.


ಅದಕ್ಕೆ ಸಿಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಬಲೆಗಳನ್ನು ಹಾಕುತ್ತೇವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು