Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:12 - ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅನಿ ಮರಲ್ಲಿ ಲೊಕಾ ಮೊಟಿ ಅನಿ ಬಾರಿಕ್ಲಿ ಸಗ್ಳಿ ಲೊಕಾ ಸಿವಾಸನಾಚ್ಯಾ ಇದ್ರಾಕ್ ಇಬೆ ಹೊತ್ತಿ ಮಿಯಾ ಬಗಟ್ಲೊ. ತನ್ನಾ ಪುಸ್ತಕಾ ಉಗ್ಡುನ್ ಹೊಲಿ, ಮಾನಾ ಅನಿಎಕ್ ಪುಸ್ತಕ್ ಉಗ್ಡುನ್ ಹೊಲೆ ಝಿತ್ತ್ಯಾಂಚೆ ಪುಸ್ತಕ್ ತೆ. ಮರಲ್ಲ್ಯಾ ಲೊಕಾಕ್ನಿ ತೆನಿ ಕರಲ್ಲ್ಯಾ ಕಾಮಾಂಚ್ಯಾ ವಿಶಯಾತ್ ಲಿವಲ್ಲ್ಯಾ ಪರ್ಕಾರ್ ಝಡ್ತಿ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:12
34 ತಿಳಿವುಗಳ ಹೋಲಿಕೆ  

ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಕೆರಳಿದವು ವಿಶ್ವ ರಾಷ್ಟ್ರಗಳು ಎರಗಿತು ನಿನ್ನ ಪ್ರಕೋಪವು ಸಮೀಪಿಸಿತು ಮೃತರ ನ್ಯಾಯತೀರ್ಪಿನ ದಿನವು ಬಂದಿದೆ ಸಮಯ ಸನ್ಮಾನಿಸಲು ನಿನ್ನ ದಾಸರನು, ಪ್ರವಾದಿಗಳನು, ದೇವಪ್ರಜೆಗಳನು ನಿನ್ನಲ್ಲಿ ಭಯಭಕುತಿಯುಳ್ಳ ಹಿರಿಯ ಕಿರಿಯರನು. ಇದಿಗೋ ಬಂದಿದೆ ಗಳಿಗೆಯು ಲೋಕನಾಶಕರನ್ನು ವಿನಾಶಗೊಳಿಸಲು", ಎಂದು ಹಾಡಿದರು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ಸಮುದ್ರವು ತನ್ನಲ್ಲಿದ್ದ ಮೃತರನ್ನು ಒಪ್ಪಿಸಿತು; ಮೃತ್ಯುವು ಪಾತಾಳವೂ ತಮ್ಮ ವಶದಲ್ಲಿದ್ದ ಮೃತರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ಆಯಿತು.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಮಾನವರು ಸಜ್ಜನರಾಗಿರಲಿ, ದುರ್ಜನರಾಗಿರಲಿ, ಪುನರುತ್ಥಾನ ಹೊಂದುವರೆಂದು ಇವರಂತೆಯೇ ನಾನು ದೇವರಲ್ಲಿ ನಂಬಿಕೆಯುಳ್ಳವನಾಗಿದ್ದೇನೆ.


ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II


ಕೇಡಿಗರು ಪರರಿಗೆ ಮಾಡಿದುದ ತಾವೇ ಉಣ್ಣಮಾಡು I ಅವರ ದುಷ್ಟಕಾರ್ಯಗಳಿಗೆ ತಕ್ಕುದಾದ ಶಿಕ್ಷೆ ನೀಡು II


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಬಳಿಕ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿ : “ದೇವರ ಎಲ್ಲಾ ದಾಸರೇ, ಅವರಲ್ಲಿ ಭಯಭಕ್ತಿಯುಳ್ಳ ಹಿರಿಯಕಿರಿಯರೇ, ನಮ್ಮ ದೇವರನ್ನು ಕೊಂಡಾಡಿ,” ಎಂದು ಹೇಳಿತು.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.


ಈ ಸಂಗತಿ ಗೊತ್ತಿರಲಿಲ್ಲವೆಂದು ನೆವ ಹೇಳಬೇಡ; ಅಂತರಂಗ ಪರಿಶೋಧಕನಿಗೆ ನಿನ್ನ ಯೋಜನೆ ತಿಳಿದಿಲ್ಲವೆ? ನಿನ್ನ ಮನಸ್ಸನ್ನು ಸಮೀಕ್ಷಿಸುವ ಆತನಿಗೆ ಇದು ಮರೆಯೇ? ಮಾನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲವನ್ನಾತ ನೀಡುವನಲ್ಲವೆ?


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಪ್ರತಿಯೊಬ್ಬನಿಗೂ ದೇವರು ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುತ್ತಾರೆ.


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆ, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆ” ಎನ್ನಬೇಡ.


ಉಳಿಸಬೇಡವರನು ಜೀವಬಾಧ್ಯರ ಪಟ್ಟಿಯಲಿ I ಸೇರಿಸಬೇಡವರನು ಸಜ್ಜನರ ಸಂಖ್ಯೆಯಲಿ II


ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು