Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:5 - ಕನ್ನಡ ಸತ್ಯವೇದವು C.L. Bible (BSI)

5 ಇದೇ ಪ್ರಥಮ ಪುನರುತ್ಥಾನ, ಮರಣಹೊಂದಿದ್ದ ಇನ್ನುಳಿದವರು ಆ ಒಂದು ಸಾವಿರ ವರ್ಷಗಳು ಮುಗಿಯುವವರೆಗೆ ಜೀವಂತರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ವಿುಕ್ಕ ಸತ್ತವರು ಆ ಸಾವಿರ ವರುಷ ತೀರುವ ತನಕ ಜೀವಿತರಾಗಿ ಏಳಲಿಲ್ಲ. ಇದೇ ಪ್ರಥಮ ಪುನರುತ್ಥಾನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 (ಸತ್ತುಹೋಗಿದ್ದ ಇತರ ಜನರು ಒಂದುಸಾವಿರ ವರ್ಷಗಳು ಮುಗಿಯುವ ತನಕ ಜೀವಂತರಾಗಲೇ ಇಲ್ಲ.) ಇದೇ ಪ್ರಥಮ ಪುನರುತ್ಥಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಉಳಿದ ಸತ್ತವರು ಆ ಸಾವಿರ ವರ್ಷ ಗತಿಸುವ ತನಕ ಜೀವಿತರಾಗಲಿಲ್ಲ. ಇದೇ ಪ್ರಥಮ ಪುನರುತ್ಥಾನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅನಿ ಹುರಲ್ಲಿ ಮರಲ್ಲಿ ಲೊಕಾ ಎಕ್ ಹಜಾರ್ ವರ್ಸಾ ಸರಿ ಪತರ್ ಝಿತ್ತಿ ಹೊವ್ನ್ ಉಟುಕ್‍ನ್ಯಾತ್ ಹೆಚ್ ‍ಅದ್ದಿಚೆ ಮರಲ್ಲೆ ಝಿತ್ತೆ ಹೊವ್ನ್ ಉಟ್ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:5
9 ತಿಳಿವುಗಳ ಹೋಲಿಕೆ  

ಹೀಗೆ ನಾನೂ ಸಹ ಮೃತ್ಯುಂಜಯನಾಗುತ್ತೇನೆ ಎಂಬುದೇ ನನ್ನ ನಂಬಿಕೆ-ನಿರೀಕ್ಷೆ.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು,” ಎಂದರು.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವದಾಯಕ ಉಸಿರು ಬಂದು ಆ ಶವಗಳನ್ನು ಹೊಕ್ಕಾಗ ಅವರು ಎದ್ದುನಿಂತರು. ಇದನ್ನು ಕಂಡವರೆಲ್ಲರೂ ಭಯದಿಂದ ನಡುಗಿದರು.


ಇಸ್ರಯೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾಗುವಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವಕ್ಕೆ ಎದ್ದುಬಂದಂತಾಗುವುದಲ್ಲವೆ?


ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು