Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:14 - ಕನ್ನಡ ಸತ್ಯವೇದವು C.L. Bible (BSI)

14 ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಯಜ್ಞದ ಕುರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಕುರಿಮರಿಯಾದವರ ಹನ್ನೆರಡು ಜನ ಅಪೊಸ್ತಲರ ಹೆಸರುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಶಾರಾಚ್ಯಾ ಬಾರಾ ಪಾಯಾ ವೈನಿ ಭಾಂದಲ್ಲೊ ಹೊತ್ತೊ ತ್ಯಾ ಬಾರಾ ಪಾಯಾಚ್ಯಾ ಗುಂಡ್ಯಾ ವೈನಿ ಬೊಕ್ಡಾಚ್ಯಾ ಬಾರಾ ಪಾಯಾಚ್ಯಾ ವರ್ತಿ ಅಪೊಸ್ತಲಾಂಚಿ ನಾವಾ ಲಿವಲ್ಲಿ ಹೊತ್ತಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:14
14 ತಿಳಿವುಗಳ ಹೋಲಿಕೆ  

ಏಕೆಂದರೆ, ಶಾಶ್ವತವಾದ ಅಸ್ತಿವಾರವುಳ್ಳ ಅಂದರೆ, ದೇವರೇ ನಿಯೋಜಿಸಿ ನಿರ್ಮಿಸಿದ ನಗರವನ್ನು ಆತನು ಎದುರುನೋಡುತ್ತಿದ್ದನು.


ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.


“ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಪ್ರಿಯರೇ, ನಮ್ಮ ಪ್ರಭುವಾದ ಕ್ರಿಸ್ತಯೇಸುವಿನ ಪ್ರೇಷಿತರು. ನಿಮಗೆ ಮುಂಚಿತವಾಗಿ ತಿಳಿಸಿದ ಮಾತುಗಳನ್ನು ನೆನಪುಮಾಡಿಕೊಳ್ಳಿ.


ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.


ಅನಂತರ ಚೀಟುಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.


ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು