Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:5 - ಕನ್ನಡ ಸತ್ಯವೇದವು C.L. Bible (BSI)

5 ಸಿಂಹಾಸನಾರೂಢನಾಗಿದ್ದವನು ಆಗ, “ಇಗೋ, ನಾನೆಲ್ಲವನ್ನೂ ಹೊಸದಾಗಿಸುತ್ತೇನೆ,” ಎಂದನು. ಅಲ್ಲದೆ ಅವನು, “ಇದನ್ನು ನೀನು ಬರೆ, ಈ ಮಾತುಗಳು ಸತ್ಯವಾದುವು ಹಾಗೂ ವಿಶ್ವಾಸಾರ್ಹವಾದುವು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. ಮತ್ತು ಒಬ್ಬನು ನನಗೆ - ಇದನ್ನು ಬರೆ; ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ!” ಎಂದರು ಮತ್ತು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ ಸತ್ಯವಾದವೂ ಆಗಿವೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಸಿವಾಸನಾ ವರ್ತಿ ಬಸಲ್ಲ್ಯಾನ್, ಬಗ್ ಮಿಯಾ ಸಗ್ಳೆ ನ್ಹವೆ ಕರ್ತಾ! ಮಟ್ಲ್ಯಾನ್. ತೆನಿ ಮಾಕಾ,“ಹೆ ಲಿವ್; ಕಶ್ಯಾಕ್ ಮಟ್ಲ್ಯಾರ್ ಹ್ಯಾ ಗೊಸ್ಟಿಯಾ ಖರ್‍ಯಾ ಅನಿ ಬರೊಸೊ ಥವ್ಕ್ ಯೊಗ್ಯ್ ಹಾತ್” ಮನುನ್‍ಬಿ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:5
14 ತಿಳಿವುಗಳ ಹೋಲಿಕೆ  

ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಮುಂತಿಳಿಸಿದ ಸಂಗತಿಗಳಿದೋ ಈಡೇರಿವೆ ಹೊಸ ಸಂಗತಿಗಳನಿದೋ ಪ್ರಕಟಿಸುವೆ ಅವು ತಲೆದೋರುವುದಕ್ಕೆ ಮುಂಚೆಯೇ ನಿಮಗೆ ತಿಳಿಸುವೆ.”


ಇಗೋ, ನೂತನ ಕಾರ್ಯವನು ನಾನೆಸಗುವೆ ಈಗಲೇ ಅದು ತಲೆದೋರುತಲಿದೆ, ನಿಮಗೆ ಕಾಣುವುದಿಲ್ಲವೇ? ಮಾರ್ಗವನ್ನು ಏರ್ಪಡಿಸುವೆ ಮರುಭೂಮಿಯಲಿ, ಹರಿಸುವೆ ತೊರೆಗಳನ್ನು ಅರಣ್ಯದಲಿ.


ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.


ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಕೂಡಲೇ, ನಾನು ದೇವರಾತ್ಮವಶನಾದೆ. ಆಗ ಸ್ವರ್ಗದಲ್ಲಿ ಒಂದು ಸಿಂಹಾಸನ ಇರುವುದನ್ನೂ ಅದರಲ್ಲಿ ಒಬ್ಬರು ಆಸೀನರಾಗಿರುವುದನ್ನೂ ಕಂಡೆ.


ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.


ಆದುದರಿಂದ ನೀನು ಕಂಡ ಘಟನೆಗಳನ್ನು ಅಂದರೆ, ಈಗ ನಡೆಯುತ್ತಿರುವ ಘಟನೆಗಳನ್ನೂ ಮುಂದೆ ಸಂಭವಿಸಲಿರುವ ಘಟನೆಗಳನ್ನೂ ಕುರಿತು ಬರೆ.


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ನಾನು ಈ ದೃಶ್ಯವನ್ನು ಸಹ ಕಂಡೆ : ಸಿಂಹಾಸನದಲ್ಲಿ ಆಸೀನರಾಗಿರುವವರ ಬಲಗೈಯಲ್ಲಿ ಒಂದು ಸುರುಳಿ ಇತ್ತು. ಅದರ ಒಳಭಾಗದಲ್ಲೂ ಹೊರಭಾಗದಲ್ಲೂ ಬರೆಯಲಾಗಿತ್ತು. ಅದನ್ನು ಏಳು ಮುದ್ರೆಗಳಿಂದ ಮುದ್ರಿಸಲಾಗಿತ್ತು.


“ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ.


ಯಾವನಾದರೂ ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳಲ್ಲಿ ಏನನ್ನಾದರೂ ತೆಗೆದುಹಾಕಿದರೆ, ಈ ಪುಸ್ತಕದಲ್ಲಿ ವಿವರಿಸಿರುವ ಜೀವವೃಕ್ಷದಲ್ಲಿಯೂ ಪವಿತ್ರನಗರದಲ್ಲಿಯೂ ಅವನಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.”


ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು