Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:6 - ಕನ್ನಡ ಸತ್ಯವೇದವು C.L. Bible (BSI)

6 ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ತೆನಿ, “ತೆ ಪುರಾ ಹೊಲೆ! ಮಿಯಾಚ್ ಪಯ್ಲೆಚೊ ಅನಿ ಆಕ್ರಿಚೊ, ಮಿಯಾಚ್ ಆರಂಬ್ ಅನಿ ಅಂತ್. ಜೆ ಕೊನ್ ಸೊಸೆನ್ ಹಾಯ್ ತೆಕಾ ಮಿಯಾ ಜಿವ್ ದಿತಲ್ಯಾ ಪಾನಿಯಾಚ್ಯಾ ಝರ್‍ಯಾತ್ಲೆ ಪಾನಿ ಫಿತಲೊ ಹಕ್ಕ್ ಫುಕೊಟ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:6
26 ತಿಳಿವುಗಳ ಹೋಲಿಕೆ  

ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ನಿನ್ನಲ್ಲಿದೆ ಜೀವದ ಬುಗ್ಗೆ I ನಿನ್ನ ಬೆಳಕಿನಿಂದ ಬೆಳಕೆಮಗೆ II


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


“ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.


ಆದರೆ ದೇವರು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಪಾಪವಿಮೋಚನೆಯನ್ನು ದಯಪಾಲಿಸಿ, ತಮ್ಮ ಉಚಿತಾರ್ಥ ಅನುಗ್ರಹದಿಂದ ಅವರನ್ನು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.


‘ಅ'ಕಾರವೂ ‘ಳ'ಕಾರವೂ ನಾನೇ ಆದಿಯೂ ಸಮಾಪ್ತಿಯೂ ನಾನೇ'. “


ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ವಾಯುಮಂಡಲದ ಮೇಲೆ ಸುರಿದನು. ಆಗ ದೇವಾಲಯದ ಸಿಂಹಾಸನದ ಕಡೆಯಿಂದ ಒಂದು ದೊಡ್ಡ ಧ್ವನಿ ಉಂಟಾಗಿ, “ಮುಗಿಸಿದ್ದಾಯಿತು,” ಎಂದು ಹೇಳಿತು.


ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ನಾವಾದರೋ ಪ್ರಾಪಂಚಿಕ ಆತ್ಮವನ್ನು ಹೊಂದಿದವರಲ್ಲ. ದೇವರು ನಮಗೆ ದಯಪಾಲಿಸಿರುವ ವರಪ್ರಸಾದಗಳನ್ನು ಅರಿತುಕೊಳ್ಳುವಂತೆ ಮಾಡುವ ಪಾರಮಾರ್ಥಿಕ ಆತ್ಮವನ್ನು ಪಡೆದಿದ್ದೇವೆ.


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ;


ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.


ಈ ಅಸ್ತಿವಾರದ ಮೇಲೆ ಕೆಲವರು ಚಿನ್ನ, ಬೆಳ್ಳಿ, ರತ್ನ - ಇವುಗಳನ್ನು ಉಪಯೋಗಿಸ ಕಟ್ಟುತ್ತಾರೆ. ಮತ್ತೆ ಕೆಲವರು ಹುಲ್ಲು, ಕಟ್ಟಿಗೆ, ಜೊಂಡು - ಇವುಗಳನ್ನು ಬಳಸುತ್ತಾರೆ.


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳಪಡದಿರಲಿ.


ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.


ಅದಕ್ಕೆ ಆಕೆ, “ನೀರು ಸೇದುವುದಕ್ಕೆ ನಿಮ್ಮಲ್ಲಿ ಏನೂ ಇಲ್ಲ, ಬಾವಿಯೂ ಆಳವಾಗಿದೆ; ಹೀಗಿರುವಲ್ಲಿ ನಿಮಗೆ ಜೀವಜಲ ಎಲ್ಲಿಂದ ಬಂದೀತು?


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು