Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:7 - ಕನ್ನಡ ಸತ್ಯವೇದವು C.L. Bible (BSI)

7 ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಜಯಹೊಂದುವವರು ಇವುಗಳಿಗೆ ಬಾಧ್ಯನಾಗುವರು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಮಕ್ಕಳಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜೆ ಕೊನ್‍ ಜಯ್ ಹೊವ್ನ್ ಜಿಕುನ್ ಯೆತ್ಯಾತ್, ತೆನಿ ಹೆ ಮಾಜೆಕ್ನಾ ಘೆತ್ಯಾತ್ ಮಿಯಾ ತೆಂಚೊ ದೆವ್ ಹೊತಾ ಅನಿ ತೆನಿ ಮಾಜಿ ಪೊರಾ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:7
26 ತಿಳಿವುಗಳ ಹೋಲಿಕೆ  

ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಯಾವ ಕೇಡೂ ಸಂಭವಿಸದು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”


ಜ್ಞಾನಿಗಳಿಗೆ ಲಭಿಸುವುದು ಸನ್ಮಾನ; ಜ್ಞಾನಹೀನರಿಗೆ ಸಿಗುವ ಸಂಭಾವನೆ ಅವಮಾನ.


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ನಾನು ಬರುವವರೆಗೆ ನೀವು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿದ್ದರೆ ಅಷ್ಟೇ ಸಾಕು.


ಅಲ್ಲಿಂದ ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿಬಂದು ಮೊಣಕಾಲೂರಿ, “ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.


ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.


ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು.


‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II


ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ಯಾರು ಯಾರು ದೇವರ ಆತ್ಮನಿಗೆ ಮಣಿದು ನಡೆಯುತ್ತಾರೋ ಅವರು ದೇವರ ಮಕ್ಕಳು.


ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೋ ಎಂದು ಸೃಷ್ಟಿಸಮಸ್ತವು ಬಹು ಉತ್ಸುಕತೆಯಿಂದ ಎದುರು ನೋಡುತ್ತಿದೆ.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು