Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:9 - ಕನ್ನಡ ಸತ್ಯವೇದವು C.L. Bible (BSI)

9 ಏಳು ಅಂತಿಮ ವಿಪತ್ತುಗಳಿಂದ ತುಂಬಿದ್ದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ದೇವದೂತರುಗಳಲ್ಲಿ ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡುತ್ತಾ - ಬಾ, ಯಜ್ಞದ ಕುರಿಯಾದಾತನಿಗೆ ಹೆಂಡತಿಯಾಗತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕಡೆಯ ಏಳು ಉಪದ್ರವಗಳನ್ನು ತಮ್ಮ ಪಾತ್ರೆಗಳಲ್ಲಿ ತುಂಬಿಕೊಂಡಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ನನ್ನ ಬಳಿಗೆ ಬಂದು, “ನನ್ನ ಸಂಗಡ ಬಾ. ಕುರಿಮರಿಯಾದಾತನ ಪತ್ನಿಯಾಗಲಿರುವ ವಧುವನ್ನು ನಾನು ನಿನಗೆ ತೋರಿಸುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಂತಿಮ ಏಳು ಉಪದ್ರವಗಳಿಂದ ತುಂಬಿದ ಏಳು ಬೋಗುಣಿಗಳನ್ನು ಹಿಡಿದಿದ್ದ ಏಳುಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ, ಯಜ್ಞದ ಕುರಿಮರಿಯಾದವವರಿಗೆ ಹೆಂಡತಿಯಾಗತಕ್ಕ ವಧುವನ್ನು ನಿನಗೆ ತೋರಿಸುವೆನು!” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಆಕ್ರಿಚ್ಯಾ ಫಿಡಾನಿ ಭರಲ್ಲಿ ಆಯ್ದಾನಾ ಧರಲ್ಲ್ಯಾ ಸಾತ್ ದೆವ್‍ದುತಾನಿತ್ಲೊ ಎಕ್ ದೆವ್‍ದುತಾ ಮಾಜ್ಯಾಕ್ಡೆ ಯೆಲೊ, ಅನಿ, “ಯೆ ಮಿಯಾ ತುಕಾ ನ್ಹವ್ರಿ ಬೊಕ್ಡಾಚಿ ಬಾಯ್ಕೊ ದಾಕ್ವುತಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:9
10 ತಿಳಿವುಗಳ ಹೋಲಿಕೆ  

ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ ! ಆತನ ಮಹಿಮೆಯನು ಕೀರ್ತಿಸೋಣ;


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.


ಅನಂತರ, ಆತನು ನಗರದ ಕೋಟೆಯನ್ನು ಅಳೆದನು. ಅದು ಆತನು ಅಳೆದ ಆಳತೆಯ ಪ್ರಮಾಣದಲ್ಲಿ ಅರವತ್ತು ಮೀಟರಿನಷ್ಟು ಎತ್ತರವಾಗಿತ್ತು.


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು