Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:1 - ಕನ್ನಡ ಸತ್ಯವೇದವು C.L. Bible (BSI)

1 ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದೆವಾಚ್ಯಾ ದುತಾನ್ ಮಾಕಾ ಜಿವ್ ದಿತಲ್ಯಾ ಪಾನಿಯಾಚಿ ನ್ಹಯ್‍ಬಿ ದಾಕ್ವುಲ್ಯಾನ್. ತೆ ಪಾನಿ ವಜ್ರಾಚ್ಯಾ ಸರ್ಕೆ ಪವಿತ್ರ್ ಹೊತ್ತೆ. ತೆ ದೆವಾಚ್ಯಾ ಅನಿ ಬೊಕ್ಡಾಚ್ಯಾ ಸಿವಾಸನಾಕ್ನಾ ಹೊಂವ್ನ್ ಯೆವ್‍ಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:1
30 ತಿಳಿವುಗಳ ಹೋಲಿಕೆ  

ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು.


ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ಹೊರಡಿಸುವೆನು ಬೋಳುಗುಡ್ಡಗಳಲ್ಲಿ ನದಿಗಳನು ತಗ್ಗುತಿಟ್ಟುಗಳಲ್ಲಿ ಒರತೆಗಳನು ಮಾರ್ಪಡಿಸುವೆನು ಕೆರೆಯಾಗಿ ಅರಣ್ಯವನು ಬುಗ್ಗೆಗಳಾಗಿ ಮರುಭೂಮಿಯನು.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.


ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.


ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ : “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.”


ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತ್ತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.


ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.


ಏಳು ಅಂತಿಮ ವಿಪತ್ತುಗಳಿಂದ ತುಂಬಿದ್ದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ದೇವದೂತರುಗಳಲ್ಲಿ ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.


ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.


ದೇವರ ಮಹಿಮೆ ಆತನಲ್ಲಿ ಪ್ರಕಟವಾದರೆ, ದೇವರೇ ನರಪುತ್ರನ ಮಹಿಮೆಯನ್ನು ತಮ್ಮಲ್ಲಿ ಪ್ರಕಟಪಡಿಸುವರು. ತಕ್ಷಣವೇ ಪ್ರಕಟಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು