Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:11 - ಕನ್ನಡ ಸತ್ಯವೇದವು C.L. Bible (BSI)

11 ಅಕ್ರಮಿಯು ತನ್ನ ಅಕ್ರಮವನ್ನು ಮುಂದುವರೆಸಲಿ. ಅಶುದ್ಧನು ತನ್ನ ಅಶುದ್ಧತೆಯಲ್ಲಿ ಮುಂದುವರೆಯಲಿ. ಸಜ್ಜನನು ತನ್ನ ಸನ್ನಡತೆಯಲ್ಲಿಯೇ ನಿರತನಾಗಿರಲಿ. ಪವಿತ್ರನು ತನ್ನ ಪಾವಿತ್ರ್ಯತೆಯನ್ನು ಹೆಚ್ಚಿಸಿಕೊಳ್ಳಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತಪ್ಪು ಮಾಡುತ್ತಿರುವವನು ತಪ್ಪುಮಾಡುತ್ತಲೇ ಮುಂದುವರಿಯಲು ಬಿಡು. ಅಶುದ್ಧನಾದವನು ಅಶುದ್ಧತೆಯಲ್ಲೇ ಮುಂದುವರಿಯಲು ಬಿಡು. ಯೋಗ್ಯವಾದುದನ್ನು ಮಾಡುವವನು ಯೋಗ್ಯವಾದುದನ್ನೇ ಮಾಡಲಿ. ಪರಿಶುದ್ಧನಾಗಿರುವವನು ಪರಿಶುದ್ಧನಾಗಿಯೇ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆ ಕೊನ್ ವಾಯ್ಟ್ ಕರುಲ್ಯಾತ್ ತೆನಿ ವಾಯ್ಟ್ ಕರುನ್ಗೆತುಚ್ ರ್‍ಹಾಂವ್ದಿತ್. ಜೊ ಕೊನ್ ಬರ್ಸೊ ಹೊಲ್ಲೊ ಹಾಯ್ ತೊ ಅನಿಉಲ್ಲೆ ಅಪ್ನಾಕುಚ್ ಬರ್ಶೆ ಕರುನ್ ಘೆಂವ್ದಿತ್; ಜೆ ಕೊನ್ ಬರಿ ಕಾಮಾ ಕರುಲ್ಯಾತ್ ತೆನಿ ಬರಿ ಕಾಮಾ ಕರುನ್ಗೆತುಚ್ ರಾಂವ್ದಿತ್, ಅನಿ ಜೆ ಕೊನ್ ಪವಿತ್ರ್ ಹಾತ್ ತೆನಿ ಪವಿತ್ರ್ ಹೊವ್ನುಚ್ ರಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:11
22 ತಿಳಿವುಗಳ ಹೋಲಿಕೆ  

ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.


ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.


“ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II


ಯೇಸು ಸ್ವಾಮಿ ಪುನಃ ಅವರಿಗೆ, “ನಾನು ಹೊರಟುಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.


ಮಳೆ ತುಂಬಿದ ಮೋಡಗಳು ನೆಲದ ಮೇಲೆ ಸುರಿದುಬಿಡುತ್ತವೆ. ಮರವು ದಕ್ಷಿಣದ ಕಡೆಗಾಗಲಿ, ಉತ್ತರದ ಕಡೆಗಾಗಲಿ ಉರುಳಿದರೆ ಬಿದ್ದ ಕಡೆಯಲ್ಲೆ ಬಿದ್ದಿರುತ್ತದೆ.


ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು.


ಈಗಲಾದರೋ ಯೇಸುಕ್ರಿಸ್ತರ ದೈವಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ.


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು