Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:14 - ಕನ್ನಡ ಸತ್ಯವೇದವು C.L. Bible (BSI)

14 “ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತಮ್ಮ ನಿಲುವಂಗಿಗಳನ್ನು ತೊಳಕೊಂಡವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಬಾಗಿಲುಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆ ಕೊನ್ ಅಪ್ನಾಚೆ ಝಗೆ ಧುವ್ನ್ ಪವಿತ್ರ್ ಕರುನ್ ಘೆತ್ಯಾತ್ ತೆನಿ ಕವ್ಡೆ ಸುಖಿ, ಅಸೆ ತೆಂಕಾ ಜಿವ್‍ ದಿತಲ್ಯಾ ಝಾಡಾಚೆ ಫಳ್ ಖಾತಲೊ ಹಕ್ಕ್ ಗಾವ್ತಾ ಅನಿ ದಾರಾನಿತ್ನಾ ಶಾರಾತ್ ಭುತ್ತುರ್ ಗುಸ್ತಲೊ ಹಕ್ಕಬಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:14
31 ತಿಳಿವುಗಳ ಹೋಲಿಕೆ  

ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.


“ಯೇಸುಸ್ವಾಮಿ ನುಡಿಯುವುದನ್ನು ಕೇಳು : ‘ಇಗೋ ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ, ದೇವರ ಆಜ್ಞೆಗಳಿಗೆ ವಿಧೇಯನಾಗಿರುವುದೇ ಮುಖ್ಯ.


ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.


ಆದುದರಿಂದ ಯೇಸು ಸ್ವಾಮಿ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು.


ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ.


ಅಲ್ಲೆಲೂಯ I ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು I ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು II


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು.


ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?


ಆದರೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸುವಾಗ ದುರ್ಬಲಮನಸ್ಸುಳ್ಳ ಸೋದರನ ವಿಶ್ವಾಸಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಿರಿ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ನಮಗೆ ಈ ಬಾವಿಯನ್ನು ಕೊಟ್ಟವನು ನಮ್ಮ ಪಿತಾಮಹ ಯಕೋಬನು. ಆತನು, ಆತನ ಮಕ್ಕಳು ಮತ್ತು ದನಕರುಗಳು ಇದೇ ಬಾವಿಯ ನೀರನ್ನು ಕುಡಿದರು. ಅಂಥ ಪಿತಾಮಹನಿಗಿಂತ ತಾವು ದೊಡ್ಡವರೋ?” ಎಂದಳು.


1335 ದಿನಗಳ ಮಟ್ಟಿಗೆ ವಿಶ್ವಾಸದಿಂದ ಕಾದಿರುವವರು ಧನ್ಯರು!


“ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು.


ಸರ್ವೇಶ್ವರನಾದ ದೇವರು, “ಮನುಷ್ಯನು ಈಗ ನಮ್ಮಲ್ಲಿ ಒಬ್ಬರಂತೆ ಒಳಿತು - ಕೆಡುಕುಗಳ ಜ್ಞಾನವನ್ನು ಪಡೆದುಬಿಟ್ಟಿದ್ದಾನೆ. ಇನ್ನು ಅಮರ ಜೀವಿಯಾಗಲು ಜೀವವೃಕ್ಷದ ಹಣ್ಣಿಗೆ ಕೈ ಚಾಚಿಬಿಡಬಾರದು,” ಎಂದುಕೊಂಡರು.


ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.


ಇದುವೇ ದ್ವಾರ ಪ್ರಭುವಿನ ಮಂದಿರಕೆ I ಇದುವೇ ಪ್ರವೇಶಮಾರ್ಗ ಸಜ್ಜನರಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು