Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:18 - ಕನ್ನಡ ಸತ್ಯವೇದವು C.L. Bible (BSI)

18 ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೂ ನಾನು ಕೊಡುವ ಎಚ್ಚರಿಕೆ ಇದು: “ಯಾವನಾದರೂ ಇವುಗಳಿಗೆ ಏನನ್ನಾದರೂ ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ವಿಪತ್ತುಗಳು ಬಂದೆರಗುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂದರೆ - ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ತಂದುಹಾಕಿದರೆ ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ತಂದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ಕೇಳಿದ ಪ್ರತಿಯೊಬ್ಬರಿಗೂ ನಾನು ಎಚ್ಚರಿಕೆ ನೀಡುತ್ತೇನೆ: ಈ ವಾಕ್ಯಗಳಿಗೆ ಯಾರಾದರೂ ಏನನ್ನಾದರೂ ಸೇರಿಸಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಅವನಿಗೆ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈ ಗ್ರಂಥದ ಪ್ರವಾದನೆಯನ್ನು ಕೇಳುವ ಪ್ರತಿಯೊಬ್ಬರಿಗೂ ನಾನು ಸಾಕ್ಷಿ ಕೊಡುವುದೇನೆಂದರೆ: ಯಾರಾದರೂ ಹೆಚ್ಚು ಮಾತುಗಳನ್ನು ಇವುಗಳಿಗೆ ಕೂಡಿಸಿದರೆ, ದೇವರು ಅವರ ಮೇಲೆ ಈ ಗ್ರಂಥದಲ್ಲಿ ಬರೆದಿರುವ ಉಪದ್ರವಗಳನ್ನು ಕೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ಜುವಾಂವ್ ಹ್ಯಾ ಪುಸ್ತಕಾತ್ಲ್ಯಾ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾ ಆಯಿಕ್ತಲ್ಯಾಕ್ನಿ ಉಶಾರ್ಕಿ ದಿವ್ನ್ ಸಾಂಗ್ತಾ. ಹ್ಯಾ ಗೊಸ್ಟಿಯಾತ್ನಿ ಅನಿ ಜಾಸ್ತಿಚೆ ಕೊನ್‍ಬಿ ಮಿಳ್ವುಲ್ಯಾರ್, ದೆವ್ ತ್ಯೆಚ್ಯಾ ಶಿಕ್ಷೆತ್ ಹ್ಯಾ ಪುಸ್ತಕಾತ್ ಸಾಂಗಲ್ಲಿ ಸಗ್ಳಿ ತರಾಸಾ ಮಿಳ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:18
23 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.


ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಇಲ್ಲವಾದರೆ ಆತ ನಿನ್ನನ್ನು ಖಂಡಿಸಿಯಾನು, ನೀನು ಸುಳ್ಳುಗಾರನಾಗಿ ತೋರಿಬಂದೀಯೆ!


ಈ ಪ್ರವಾದನಾ ಸಂದೇಶವನ್ನು ಓದುವವನು ಧನ್ಯನು: ಓದಿದ್ದನ್ನು ಕೇಳಿಸಿಕೊಳ್ಳುವವರೂ ಧನ್ಯರು ಮತ್ತು ಈ ಪ್ರವಾದನೆಯಲ್ಲಿ ಲಿಖಿತವಾಗಿರುವುದನ್ನು ಕೈಗೊಂಡು ನಡೆಯುವವರು ಸಹ ಧನ್ಯರು! ಏಕೆಂದರೆ, ಕಾಲ ಸನ್ನಿಹಿತವಾಯಿತು.


“ಯೇಸುಸ್ವಾಮಿ ನುಡಿಯುವುದನ್ನು ಕೇಳು : ‘ಇಗೋ ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.


“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಅದಕ್ಕೆ ಯೇಸು, “ನನ್ನ ಪರಮಪಿತನು ನೆಡದ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಏಳು ವಿಪತ್ತುಗಳನ್ನು ಹಿಡಿದಿದ್ದ ಏಳು ದೇವದೂತರು ಈ ದೇವಾಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಹೊಳೆಯುವ ಉಡುಪುಗಳನ್ನು ತೊಟ್ಟಿದ್ದರು; ಎದೆಗಳಿಗೆ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡು ಇದ್ದರು.


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು. ಶತ್ರುಗಳ ಮುಂದೆ ನಿಲ್ಲಲಾರಿರಿ.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.


ಆದರೆ ಆತನು, “ನೀನು ನನಗೆ ಅಡ್ಡಬೀಳಬೇಡ, ಪ್ರವಾದಿಗಳಾದ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಂಡು ನಡೆಯುವವರಿಗೂ ನಿನಗೂ ನಾನು ಸಹಸೇವಕನು ಮಾತ್ರ. ಆದ್ದರಿಂದ ನೀನು ದೇವರನ್ನು ಆರಾಧಿಸು,” ಎಂದು ತಿಳಿಸಿದನು.


ಇದಲ್ಲದೆ ಆತನು ನನಗೆ, “ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳಿಗೆ ಮುದ್ರೆಹಾಕಿ ಮುಚ್ಚಿಡಬೇಡ; ಇವು ನೆರವೇರುವ ಕಾಲವು ಸಮೀಪಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು