Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:3 - ಕನ್ನಡ ಸತ್ಯವೇದವು C.L. Bible (BSI)

3 ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇನ್ನು ಶಾಪಗ್ರಸ್ತವಾದದ್ದು ಒಂದೂ ಇರುವದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನವಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರಿಂದ ಶಾಪ ಹೊಂದಿದ ಯಾವುದೂ ಆ ಪಟ್ಟಣದಲ್ಲಿರುವುದಿಲ್ಲ. ದೇವರ ಮತ್ತು ಕುರಿಮರಿಯಾದಾತನ (ಯೇಸು) ಸಿಂಹಾಸನವು ಆ ನಗರದಲ್ಲಿರುತ್ತದೆ. ದೇವರ ಸೇವಕರು ಆತನನ್ನು ಆರಾಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತ್ಯಾ ಶಾರಾತ್ ದೆವಾಚ್ಯಾ ಸರಾಪಾಚ್ಯಾ ಖಾಲ್ತಿ ಹೊತ್ತೆ ಕಾಯ್ಬಿ ನತ್ತೆ. ದೆವಾಚೆ ಅನಿ ಬೊಕ್ಡಾಚೆ ಸಿವಾಸನ್ ಶಾರಾತ್ ರ್‍ಹಾತಾ ಅನಿ ತೆಚಿ ಸೆವಕಾ ತೆಚೆ ಆರಾದನ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:3
20 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪಕ್ಕೆ ತುತ್ತಾಗದೆ ಜನರು ನೆಮ್ಮದಿಯಾಗಿ ನೆಲೆಗೊಂಡಿರುವರು.


ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


“ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.


ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಅವರು ಗಟ್ಟಿಯಾದ ಧ್ವನಿಯಿಂದ : “ಸಿಂಹಾಸನಾರೂಢರಾದ ದೇವರಿಂದ, ಬಲಿಯರ್ಪಿತರಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ಧಾರ,” ಎಂದು ಹಾಡಿದರು.


ದೇವರ ಮಹಿಮೆ ಆತನಲ್ಲಿ ಪ್ರಕಟವಾದರೆ, ದೇವರೇ ನರಪುತ್ರನ ಮಹಿಮೆಯನ್ನು ತಮ್ಮಲ್ಲಿ ಪ್ರಕಟಪಡಿಸುವರು. ತಕ್ಷಣವೇ ಪ್ರಕಟಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು