Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:4 - ಕನ್ನಡ ಸತ್ಯವೇದವು C.L. Bible (BSI)

4 ಆ ಹೆಸರು ಆ ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನ ದಾಸರು ಆತನಿಗೆ ಯಾಜಕಸೇವೆ ಮಾಡುವರು; ಅವರಿಗೆ ಆತನ ಮುಖದರ್ಶನವಾಗುವದು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಆತನ ಮುಖವನ್ನು ನೋಡುತ್ತಾರೆ. ದೇವರ ಹೆಸರನ್ನು ಅವರ ಹಣೆಗಳ ಮೇಲೆ ಬರೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರ ಮುಖವನ್ನು ಅವರು ಕಾಣುವರು. ಅವರ ಹಣೆಗಳ ಮೇಲೆ ದೇವರ ಹೆಸರು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ತೆಚೆ ತೊಂಡ್ ಬಗ್ತ್ಯಾತ್, ಅನಿ ತೆಂಚ್ಯಾ ಕಪಾಳಾ ವೈನಿ ತೆಚೆ ನಾಂವ್ ಲಿವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:4
18 ತಿಳಿವುಗಳ ಹೋಲಿಕೆ  

ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು.


ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ಆಗ ಅವನು ದೇವರಿಗೆ ಪ್ರಾರ್ಥನೆ ಮಾಡುವನು ಆತನ ಒಲುಮೆಗೆ ಪಾತ್ರನಾಗುವನು. ಹರ್ಷೋದ್ಗಾರದಿಂದ ಆತನ ಸನ್ನಿಧಿಗೆ ಬರುವನು ಮತ್ತೆ ಆತನಿಂದ ಸತ್ಯವಂತ ಎನಿಸಿಕೊಳ್ಳುವನು.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


“ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ಅಲಂಕೃತ ರಾಜನನ್ನು ನಿಮ್ಮ ಕಣ್ಣುಗಳು ಕಾಣುವುವು. ಸವಿಸ್ತಾರವಾದ ನಾಡೊಂದನ್ನು ನಿಮ್ಮ ಕಣ್ಣುಗಳು ನೋಡಿ ನಲಿಯುವುವು.


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.


ಆಗ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ I ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು