5 ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.
ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.
ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ.
ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".
ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.
ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.
ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.