Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:14 - ಕನ್ನಡ ಸತ್ಯವೇದವು C.L. Bible (BSI)

14 “ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ ‘ಆಮೆನ್’ ಎಂಬಾತನು ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಲವೊದಿಕೀಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಆಮೆನ್ ಎಂಬವರೂ ನಂಬಿಗಸ್ತರೂ ಸತ್ಯಸಾಕ್ಷಿಯೂ ದೇವರಿಂದಾದ ಸೃಷ್ಟಿಗೆ ಒಡೆಯರೂ ಆಗಿರುವವರು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಲವೊದಿಸಿಯಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ಆಮೆನ್, ಮನ್ತಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ. ತೊ ವಿಶ್ವಾಸಾಚೊ ಅನಿ ಖರಿ ಸಾಕ್ಷಿ, ದೆವಾನ್ ರಚಲ್ಲ್ಯಾ ಸಗ್ಳ್ಯಾಚೊ ಮುಳ್ ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:14
22 ತಿಳಿವುಗಳ ಹೋಲಿಕೆ  

ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


ಏಕೆಂದರೆ, ದೇವರು ಮಾಡಿದ ಸಮಸ್ತ ವಾಗ್ದಾನಗಳಿಗೂ ‘ಹೌದು’ ಎಂಬ ಉತ್ತರ ಸಾಕ್ಷಾತ್ ಅವರೇ. ಈ ಕಾರಣದಿಂದಲೇ ನಾವು ದೇವರ ಮಹಿಮೆಯನ್ನು ಸಾರುವಾಗ ಯೇಸುಕ್ರಿಸ್ತರ ಮುಖಾಂತರವೇ ‘ಆಮೆನ್’ ಎನ್ನುತ್ತೇವೆ.


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


‘ಅ'ಕಾರವೂ ‘ಳ'ಕಾರವೂ ನಾನೇ ಆದಿಯೂ ಸಮಾಪ್ತಿಯೂ ನಾನೇ'. “


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಅದಕ್ಕೆ ಅವರು ಯೆರೆಮೀಯನಿಗೆ, “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮೂಲಕ ನಮಗೆ ಕಳಿಸುವ ಮಾತಿನಂತೆ ನಾವು ನಡೆಯದಿದ್ದರೆ, ಆ ಸರ್ವೇಶ್ವರನೇ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು, ನಮ್ಮನ್ನು ಖಂಡಿಸಲಿ.


ಹಳೆಯ ಕಷ್ಟದುಃಖಗಳು ಇನ್ನು ಕಣ್ಮರೆಯಾಗಿಹೋಗುವುವು: ನಾಡಿನಲ್ಲಿ ಆಶೀರ್ವಾದ ಪಡೆಯುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಆಶೀರ್ವಾದ ಪಡೆಯುವನು. ಶಪಥ ಮಾಡುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಶಪಥಮಾಡುವನು.”


ತನ್ನ ಸೃಷ್ಟಿಕ್ರಮದಲ್ಲಿ ಸರ್ವೇಶ್ವರ ನಿರ್ಮಿಸಿದ ನನ್ನನ್ನು ಮೊತ್ತಮೊದಲು ಆತನ ಪುರಾತನ ಕಾರ್ಯಕ್ರಮಗಳಲ್ಲಿ ನಾನೇ ಪ್ರಥಮಳು.


ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:


ಈ ಪತ್ರವನ್ನು ನೀವು ಓದಿದ ಬಳಿಕ ಲವೊದಿಕೀಯದ ಸಭೆಯವರಿಗೆ ಓದಿ ಹೇಳುವ ವ್ಯವಸ್ಥೆಮಾಡಿರಿ. ಅಂತೆಯೇ, ಲವೊದಿಕೀಯದಿಂದ ಕಳಿಸಲಾಗುವ ಪತ್ರವನ್ನು ತರಿಸಿಕೊಂಡು ಓದಿರಿ.


ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಸಬಯಸುತ್ತೇನೆ.


ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.


ರೂಬೇನನೇ, ನೀನೆನ್ನ ಜೇಷ್ಠಪುತ್ರನು ನನ್ನ ಚೈತನ್ಯಸ್ವರೂಪನು, ನನ್ನ ವೀರ್ಯದ ಪ್ರಥಮ ಫಲ ನೀನು ಹಿರಿಮೆಯಲು, ಒಲುಮೆಯಲು ಪ್ರಮುಖನೆನಿಸಿಕೊಳ್ಳುವವನು.


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲವನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ಪ್ರಥಮಫಲ, ಅವನೇ ಚೊಚ್ಚಲುತನದ ಹಕ್ಕಿಗೆ ಬಾಧ್ಯಸ್ತ.


ಸತ್ಯಸಾಕ್ಷಿ ಸುಳ್ಳಾಡದ ವ್ಯಕ್ತಿ; ಸುಳ್ಳು ಸಾಕ್ಷಿ ಅಬದ್ಧಪ್ರಿಯ ವ್ಯಕ್ತಿ.


ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ.


ಅದಕ್ಕೆ ಯೇಸು, ‘ನಾನೇ ನನ್ನ ಪರವಾಗಿ ಸಾಕ್ಷಿ ನೀಡಿದರೂ ನನ್ನ ಸಾಕ್ಷಿಗೆ ಬೆಲೆಯುಂಟು. ಏಕೆಂದರೆ, ನಾನು ಎಲ್ಲಿಂದ ಬಂದೆ, ಎಲ್ಲಿಗೆ ಹೋಗುತ್ತಿರುವೆ, ಎಂದು ನನಗೆ ತಿಳಿದಿದೆ. ನಿಮಗಾದರೋ ನಾನು ‘ಬಂದುದು ಎಲ್ಲಿಂದ, ಹೋಗುವುದು ಎಲ್ಲಿಗೆ’ ಎಂದು ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು