Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:18 - ಕನ್ನಡ ಸತ್ಯವೇದವು C.L. Bible (BSI)

18 ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆಚೆಸಾಟ್ನಿ ಮಿಯಾ ತುಕಾ ಸಾಂಗ್ತಾ, ತಿಯಾ ಸಾವ್ಕಾರ್ ಹೊವ್ಕ್ ಮನುನ್ ಸೊನೆ, ಬರ್‍ಯಾತ್ಲೆ ಬರೆ ಸೊನೆ ಮಾಜೆಕ್ನಾ ಇಕಾತ್ ಘೆ, ಅನಿ ತುಜಿ ಮರ್ಯಾದ್ ಧಾಪುನ್ ಘೆವ್ಕ್ ತುಜ್ಯಾ ಆಂಗಾರ್ ನೆಸುಕ್ ಫಾಂಡ್ರೆ ಕಪ್ಡೆಬಿ ಮಾಜೆಕ್ನಾ ಇಕಾತ್ ಘೆ. ತುಜ್ಯಾ ಡೊಳ್ಯಾಕ್ನಿ ದಿಸಿ ಸರ್ಕೆ ಹೊತಲೆ ಉಲ್ಲೆಸೆ ವೊಕಾತ್‍ಬಿ ತಿಯಾ ಮಾಜೆಕ್ನಾ ಇಕಾತ್ ಘೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:18
34 ತಿಳಿವುಗಳ ಹೋಲಿಕೆ  

“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.


ದಿವ್ಯವಾದುವು, ಭವ್ಯವಾದುವು, ಮೌಲ್ಯವಾದುವು, ಆಕೆಗಿತ್ತ ಉಡುಗೆತೊಡುಗೆಗಳು; ಸತ್ಕಾರ್ಯಗಳೇ ದೇವಜನರು ಧರಿಸುವ ಅಮೂಲ್ಯ ಉಡುಗೆತೊಡುಗೆಗಳು.”


ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನುಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು.


ಸಭಾಪ್ರಮುಖರಲ್ಲಿ ಒಬ್ಬನು, “ಶ್ವೇತಾಂಬರರಾದ ಇವರೆಲ್ಲರೂ ಯಾರು? ಎಲ್ಲಿಂದ ಬಂದರು?” ಎಂದು ನನ್ನ‍ನ್ನು ಪ್ರಶ್ನಿಸಿದನು.


“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.


ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಶಾಫೀರಿನವರೇ, ಬೆತ್ತಲೆಯಾಗಿ ಲಜ್ಜೆಗೆಟ್ಟು ತೊಲಗಿರಿ. ಚಾನಾನಿನವರಿಗೆ ಹೊರಬರಲು ಧೈರ್ಯವಿಲ್ಲ. ಬೇತೇಲಿನವರ ಗೋಳಾಟ ಕೇಳಿಬಂದಾಗ, ಅಲ್ಲಿ ನಿಮಗೆ ಆಶ್ರಯವಿಲ್ಲವೆಂದು ಗೊತ್ತಾಗುವುದು.


ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II


ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಮುಯ್ಯಿ ತೀರಿಸುವೆನು ಯಾರನ್ನೂ ಕರುಣಿಸದೆ ಬೀದಿಪಾಲಾಗುವೆ ನೀನು ಲಜ್ಜೆಗೆಟ್ಟು, ಮಾನವಿಲ್ಲದೆ.”


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು.


“ತನಗೋಸ್ಕರ ಸಂಪತ್ತನ್ನು ಶೇಖರಿಸಿ ಇಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು.


ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನೆವೆ, ನಿನಗೆ ನಾ ವಿರೋಧಿಯಾಗಿರುವೆನು ಬಿಚ್ಚಿ ಮುಖದ ಮೇಲೆತ್ತುವೆನು ನಿನ್ನ ನೆರಿಗೆಗಳನು ಜನಾಂಗಗಳಿಗೆ ತೋರಿಸುವೆನು ನಿನ್ನ ಬೆತ್ತಲೆತನವನು ರಾಜ್ಯಗಳಿಗೆ ಕಾಣಿಸುವೆನು ನಿನ್ನ ಅವಮಾನವನು.


ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.


ನಿನ್ನ ಉಡುಗೆಯನ್ನು ನಿನ್ನ ಕಣ್ಮುಂದೆಯೇ ಕೀಳಿಸುವೆನು. ನೀನು ಅತ್ಯಾಚಾರಕ್ಕೆ ಈಡಾಗುವೆ.


ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ಅರಸನ ಆಜ್ಞೆಯನ್ನು ಕೈಗೊಳ್ಳಬೇಕೆಂಬುದು ನನ್ನ ಬೋಧೆ.


ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.


ನನ್ನ ಆಲೋಚನೆಯನ್ನು ಅವರು ಕೇಳಲಿಲ್ಲ, ನನ್ನ ಪ್ರತಿಯೊಂದು ಎಚ್ಚರಿಕೆಯ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ.


ನನ್ನ ಬುದ್ಧಿವಾದವನ್ನು ಅಲಕ್ಷ್ಯಮಾಡಿದಿರಿ, ನನ್ನ ತಿದ್ದುಪಾಟನ್ನು ತಳ್ಳಿಬಿಟ್ಟಿರಿ.


ಕುಳಿತಿದ್ದರವರು ಕತ್ತಲಲಿ, ಕಗ್ಗತ್ತಲಲಿ I ನರಳುತ್ತಿದ್ದರು ಬಂಧಿತರಾಗಿ ಬೇಡಿಗಳಲಿ II


ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ I ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ II


ಅವರು ಸದ್ಗುಣಶೀಲರಾಗಬೇಕು, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಶ್ರೀಮಂತರಾಗಿರಬೇಕು. ದಾನಶೀಲರೂ ಇತರರೊಂದಿಗೆ ಪಾಲು ಹಂಚಿಕೊಳ್ಳುವವರೂ ಪರೋಪಕಾರಿಗಳೂ ಆಗಿರಬೇಕು.


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು