Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:2 - ಕನ್ನಡ ಸತ್ಯವೇದವು C.L. Bible (BSI)

2 ಎಚ್ಚೆತ್ತು ನಿನ್ನಲ್ಲಿ ಉಳಿದಿರುವುಗಳನ್ನು ಉತ್ತೇಜನಗೊಳಿಸು; ಅವು ಸಾವಿನ ದವಡೆಯಲ್ಲಿವೆ. ನನ್ನ ದೇವರ ದೃಷ್ಟಿಯಲ್ಲಿ ನಿನ್ನ ಕೃತ್ಯಗಳು ಯಾವುವೂ ಸಮಗ್ರವಾಗಿರುವುದು ನನಗೆ ಕಂಡುಬಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಎಚ್ಚರವಾಗು, ಸಾಯುವ ಹಾಗಿರುವ ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಚ್ಚರವಾಗಿರು; ಸಾಯುವ ಹಾಗಿದ್ದ ಉಳಿದವುಗಳನ್ನು ದೃಢಪಡಿಸು. ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಸಂಪೂರ್ಣವಾದದ್ದೆಂದು ನಾನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎದ್ದೇಳು! ಸಾಯುವ ಸ್ಥಿತಿಯಲ್ಲಿರುವಂಥವುಗಳನ್ನು ಬಲಪಡಿಸು. ನೀನು ಮಾಡಿರುವ ಕಾರ್ಯಗಳನ್ನು ನನ್ನ ದೇವರ ದೃಷ್ಟಿಯಲ್ಲಿ ನಿಷ್ಕಳಂಕವಾಗಿರುವುದನ್ನು ನಾನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಎಚ್ಚರವಾಗು, ಸಾಯುವ ಹಾಗಿರುವ ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳು ನನಗೆ ಪರಿಪೂರ್ಣವಾಗಿ ಕಂಡುಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತಸೆಮನುನ್ ಉಟ್ ಅನಿ ಜೆ ಕವ್ಡೆ ತುಜೆಕ್ಡೆ ಝಿತ್ತೆ ಹುರಲ್ಲೆ ಹಾಯ್ ತೆಬಿ ಮರುನ್ ಜಾವ್ಚ್ಯಾ ಅದ್ದಿ ಘಟ್ ಕರುನ್ ಘೆ. ತಿಯಾ ಜೆ ಕಾಯ್-ಕಾಯ್ ಕರ್‍ಲೆ ತೆ ಮಾಜ್ಯಾ ದೆವಾಚ್ಯಾ ನದ್ರೆತ್ ಸಮಾ ದಿಸಿನಸಲ್ಲೆ ಕರ್‍ಲೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:2
31 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಜೋಲುಬಿದ್ದ ಕೈಗಳನ್ನು ಬಲಗೊಳಿಸಿರಿ ನಡುಗುವ ಕಾಲುಗಳನ್ನು ದೃಢಗೊಳಿಸಿರಿ.


ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ತದೇಕಚಿತ್ತದಿಂದಲ್ಲ.


ಅಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು.


ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.


ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.


ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ: ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


'ತೆಕೇಲ್’ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನಿನ್ನ ತೂಕ ಕಡಿಮೆಯಾಗಿ ಕಂಡುಬಂದಿದೆ.


ನಿನ್ನ ನಡತೆಯನ್ನು ಬಯಲಿಗೆ ತರುವೆನು. ಆಗ ನಿನ್ನ ಕೃತ್ಯಗಳು ನಿನಗೆ ನೆರವಾಗವು.


ಈ ಕಾವಲುಗಾರರು ಕುರುಡರು, ಇವರಿಗೆ ತಿಳುವಳಿಕೆಯಿಲ್ಲ. ಇವರೆಲ್ಲರೂ ಬೊಗಳಲಾರದ ಮೂಕನಾಯಿಗಳು, ಮಲಗಿಕೊಂಡು ಕನವರಿಸುವ ನಿದ್ದೆಕೋರ ನಾಯಿಗಳು.


ತನ್ನ ತಂದೆ ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಜ ದಾವೀದನು ದೇವರಾದ ಸರ್ವೇಶ್ವರನಿಗೆ ಪೂರ್ಣಮನಸ್ಸಿನಿಂದ ಸೇವೆಸಲ್ಲಿಸಿದಂತೆ ಇವನು ಸೇವೆಸಲ್ಲಿಸಲಿಲ್ಲ.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


ಏಕೆಂದರೆ ನಾಡಿನಲ್ಲಿ ಒಬ್ಬ ಕುರುಬನು ಏಳುವಂತೆ ನಾನು ಮಾಡುವೆನು. ಅವನು ಅಳಿದುಹೋದ ಕುರಿಗಳನ್ನು ಗುಣಪಡಿಸನು; ಚದರಿಹೋದ ಕುರಿಗಳನ್ನು ಹುಡುಕಿತರನು; ಉಳಿದವುಗಳನ್ನು ಸಾಕಲಾರನು. ಕೊಬ್ಬಿದ ಕುರಿಗಳನ್ನು ಕಡಿದು, ಅವುಗಳ ಗೊರಸುಗಳನ್ನೂ ಸುಲಿದು ಕಬಳಿಸುವನು.


ನಾನು ನಿಮಗೆ ಬಾಯಿಮಾತಿನಿಂದ ಧೈರ್ಯ ಹೇಳಬಹುದಿತ್ತು ತುಟಿಮಾತುಗಳಿಂದ ಆದರಿಸಿ ಸಾಂತ್ವನ ನೀಡಬಹುದಿತ್ತು.


“ಸಾರ್ದಿಸ್‍ನಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ದೇವರ ಸಪ್ತ ಆತ್ಮಗಳನ್ನೂ ಸಪ್ತ ನಕ್ಷತ್ರಗಳನ್ನೂ ಹೊಂದಿರುವಾತನು ನೀಡುವ ಸಂದೇಶವಿದು: ನಿನ್ನ ಕೃತ್ಯಗಳನ್ನು ನೀನು ಬಲ್ಲೆ. ಹೆಸರಿಗೆ ಮಾತ್ರ ನೀನು ಜೀವಂತನಾಗಿರುವೆ. ಆದರೆ ವಾಸ್ತವವಾಗಿ ನೀನು ಸತ್ತಂತೆಯೇ ಸರಿ.


ನಿನಗೆ ಕೊಡಲಾದ ಬೋಧನೆಯನ್ನೂ ಅದನ್ನು ನೀನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೋ. ಅದರಂತೆ ನಡೆದು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಎಚ್ಚೆತ್ತುಕೊಳ್ಳದಿದ್ದರೆ ನಾನು ಕಳ್ಳನು ಬರುವಂತೆ ಬರುತ್ತೇನೆ. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಧಾಳಿಮಾಡುತ್ತೇನೆಂದೇ ನಿನಗೆ ತಿಳಿಯದು.


ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು