ಪ್ರಕಟನೆ 3:20 - ಕನ್ನಡ ಸತ್ಯವೇದವು C.L. Bible (BSI)20 ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಶಬ್ದವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟಮಾಡುವೆನು, ಅವನು ನನ್ನ ಸಂಗಡ ಊಟಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಆಯ್ಕ್! ಮಿಯಾ ದಾರಾರ್ ಇಬೆ ರ್‍ಹಾವ್ನ್ ದಾರ್ ಬಡ್ವುತಾ, ಜೆ ಕೊನ್ ಮಾಜೊ ಧನ್ ಆಯಿಕ್ತಾ ಅನಿ ದಾರ್ ಉಗಡ್ತಾ, ತೆಂಚ್ಯಾ ಘರಾತ್ನಿ ಮಿಯಾ ಭುತ್ತುರ್ ಗುಸ್ತಾ ಅನಿ ತೆಂಚ್ಯಾ ವಾಂಗ್ಡಾ ಜೆವಾನ್ ಕರ್ತಾ, ಅನಿ ತೆನಿಬಿ ಮಾಜ್ಯಾ ವಾಂಗ್ಡಾ ಜೆವಾನ್ ಕರ್‍ತ್ಯಾತ್. ಅಧ್ಯಾಯವನ್ನು ನೋಡಿ |