ಪ್ರಕಟನೆ 3:4 - ಕನ್ನಡ ಸತ್ಯವೇದವು C.L. Bible (BSI)4 ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೂ ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು ಯೋಗ್ಯರಾಗಿರುವುದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನೊಳಗೆ ನಿನ್ನಲ್ಲಿದ್ದಾರೆ; ಅವರು ಯೋಗ್ಯರಾಗಿರುವದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ನಿಮ್ಮ ಸಭೆಗೆ ಸೇರಿದ ಸಾರ್ದಿಸಿನ ಕೆಲವರು ಇನ್ನೂ ಪರಿಶುದ್ಧರಾಗಿದ್ದಾರೆ. ಅವರು ತಮ್ಮ ಬಟ್ಟೆಗಳನ್ನು ಕೊಳಕು ಮಾಡಿಕೊಂಡಿಲ್ಲ. ಅವರು ನನ್ನೊಂದಿಗೆ ನಡೆಯುವರು. ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಕೆಲವು ಜನರು ಸಾರ್ದಿಸಿ ಪಟ್ಟಣದಲ್ಲಿ ಇದ್ದಾರೆ, ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಖರೆ ಸಾರ್ದಿಸಾತ್ ತುಮ್ಚ್ಯಾ ಮದ್ಲ್ಯಾ ಉಲ್ಲ್ಯಾ ಲೊಕಾನಿ ಅಪ್ನಾಚೆ ಕಪ್ಡೆ ಮ್ಹೆಳ್ವಿ ನಸ್ತಾನಾ ಥವ್ನ್ ಘೆಟ್ಲ್ಯಾನಾತ್. ತುಮಿ ಫಾಂಡ್ರೆ ಕಪ್ಡೆ ನೆಸುನ್ ಮಾಜ್ಯಾ ವಾಂಗ್ಡಾ ಚಲ್ತ್ಯಾಶಿ. ಕಶ್ಯಾಕ್ ಮಟ್ಲ್ಯಾರ್ ತುಮಿ ಹೆಕಾ ಯೊಗ್ಯ್ ಹಾಸಿ. ಅಧ್ಯಾಯವನ್ನು ನೋಡಿ |