ಪ್ರಕಟನೆ 3:5 - ಕನ್ನಡ ಸತ್ಯವೇದವು C.L. Bible (BSI)5 ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಜಯಶಾಲಿಗೆ ಹೀಗೆ ಶುಭ್ರವಸ್ತ್ರಗಳನ್ನು ಹೊದಿಸುವರು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಬಿಡದೆ ಅವನು ನನ್ನವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಒಪ್ಪುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಜಯಗಳಿಸುವ ಪ್ರತಿಯೊಬ್ಬನೂ ಈ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ಆ ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಜೆ ಕೊನ್ ಜಿಕುನ್ ಜಯ್ ಹೊತ್ಯಾತ್ ತೆಂಕಾ ಅಸೆ ಫಾಂಡ್ರೆ ಕಪ್ಡೆ ನೆಸ್ವುನ್ ಹೊತ್ಯಾತ್, ಅನಿ ಮಿಯಾ ಜಿವಾಚ್ಯಾ ಪುಸ್ತಕಾತ್ನಾ ತೆಂಚಿ ನಾವಾ ಪುಸುನ್ ಕಾಡಿನಾ. ಮಾಜ್ಯಾ ಬಾಬಾಚ್ಯಾ ಅನಿ ತ್ಯೆಚ್ಯಾ ದುತಾಂಚ್ಯಾ ಇದ್ರಾಕ್ ತಿ ಮಾಜಿ ಲೊಕಾ ಮನುನ್ ಕಾಯ್ಬಿ ಧಾಪಿನಸ್ತಾನಾ ಮಿಯಾ ಸಾಂಗ್ತಾ. ಅಧ್ಯಾಯವನ್ನು ನೋಡಿ |