Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:7 - ಕನ್ನಡ ಸತ್ಯವೇದವು C.L. Bible (BSI)

7 “ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಫಿಲಾದಾಲ್ಫಿಯಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ಜೊ ಕೊನ್ ಪವಿತ್ರ್ ಅನಿ ಖರೊ ಹಾಯ್ ತೆಚೆಕ್ನಾ ಯೆಲ್ಲಿ ಬಾತ್ಮಿ ಹಿ. ದಾವಿದಾಕ್ ಸಮಂದ್‍ಪಡಲ್ಲ್ಯಾ ಸಗ್ಳ್ಯಾನಿ ಚಾವಿ ತೆಚೆಕ್ಡೆ ಹಾಯ್, ಅನಿ ತೆನಿ ದಾರ್ ಉಗಡ್ಲ್ಯಾನ್ ತರ್ ಕೊನಾಕ್‍ಬಿ ತೆ ಧಾಪುಕ್ ಹೊಯ್ನಾ, ಅನಿ ತೆನಿ ತೆ ಧಾಪ್ಲ್ಯಾನ್ ತರ್ ಕೊನಾಕ್‍ಬಿ ತೆ ಉಗ್ಡುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:7
38 ತಿಳಿವುಗಳ ಹೋಲಿಕೆ  

ದಾವೀದ ಮನೆತನದ ಅಧಿಕಾರವನ್ನು ಅವನ ಹೆಗಲ ಮೇಲೆ ಹೊರಿಸುವೆನು. ಅವನು ತೆರೆದ ಬಾಗಿಲನ್ನು ಯಾರೂ ಮುಚ್ಚರು; ಅವನು ಮುಚ್ಚಿದ ಬಾಗಿಲನ್ನು ಯಾರೂ ತೆರೆಯರು.


ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,”


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಆತ ಕೆಡವಿದ್ದನ್ನು ಯಾರಿಂದಲೂ ಕಟ್ಟಲಾಗದು ಆತ ಸೆರೆಹಿಡಿದವರನ್ನು ಯಾರಿಂದಲೂ ಬಿಡಿಸಲಾಗದು.


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು.


ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಗಟ್ಟಿಯಾಗಿ ಕಿರುಚಿದನು.


ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ನಮ್ಮ ಉದ್ಧಾರಕನ ನಾಮಧೇಯ ಸೇನಾಧೀಶ್ವರ ಸರ್ವೇಶ್ವರ ಆತನೇ ಇಸ್ರಯೇಲರಿಗೆ ಪರಮಪವಿತ್ರ.


ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರ ಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’


ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II


ಗುರಾಣಿಯಂತಿಹ ನಮ್ಮ ರಾಜನು ಪ್ರಭುವಿನವನೇ I ಇಸ್ರಯೇಲಿನ ಪರಮಪಾವನ ಸ್ವಾಮಿಗೆ ಸೇರಿದವನೇ II


ಆತ ಹಾದುಹೋದರೂ ಸೆರೆಹಿಡಿದರೂ ನ್ಯಾಯಾಲಯಕ್ಕೆ ಎಳೆದರೂ ತಡೆವರಾರು?


ಸಿಂಹಾಸನಾರೂಢನಾಗಿದ್ದವನು ಆಗ, “ಇಗೋ, ನಾನೆಲ್ಲವನ್ನೂ ಹೊಸದಾಗಿಸುತ್ತೇನೆ,” ಎಂದನು. ಅಲ್ಲದೆ ಅವನು, “ಇದನ್ನು ನೀನು ಬರೆ, ಈ ಮಾತುಗಳು ಸತ್ಯವಾದುವು ಹಾಗೂ ವಿಶ್ವಾಸಾರ್ಹವಾದುವು,” ಎಂದು ಹೇಳಿದನು.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು : “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”


ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ : “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.


“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:


ನಮಗೆ ಅಡ್ಡ ಬರಬೇಡಿ. ನಮ್ಮ ದಾರಿಯಿಂದ ದೂರವಿರಿ. ಇಸ್ರಯೇಲರ ಪರಮಪಾವನ ಸ್ವಾಮಿಯ ವಿಷಯವನ್ನು ನಮ್ಮ ಮುಂದೆ ಎತ್ತಬೇಡಿ,” ಎಂದು ಹೇಳುತ್ತಾರೆ.


ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು