Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:9 - ಕನ್ನಡ ಸತ್ಯವೇದವು C.L. Bible (BSI)

9 ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಆಯ್ಕ್! ತ್ಯಾ ಸೈತಾನಾಕ್ ಸಮಂದ್‍ಪಡಲ್ಲ್ಯಾ ತಾಂಡ್ಯಾಚೆ ಸರ್ಕೆ,ತೆನಿ ಜುದೆವ್ ನ್ಹಯ್ ಹೊಲ್ಯಾರ್ಬಿ ಅಪ್ನಿ ಜುದೆವ್ ಮನುನ್ ಸಾಂಗ್ತಲಿ ಲೊಕಾ ತಿ. ಮಿಯಾ ತ್ಯಾ ಲೊಕಾನಿ ಯೆವ್ನ್ ತುಮ್ಚ್ಯಾ ಪಾಂಯಾತ್ನಿ ಪಡಿಸರ್ಕೆ ಕರ್ತಾ. ತನ್ನಾ ತೆಂಕಾ ಕಳುನ್ ಯೆತಾ ಮಿಯಾ ತುಮ್ಚೊ ಪ್ರೆಮ್ ಕರ್ತಾ ಮನುನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:9
13 ತಿಳಿವುಗಳ ಹೋಲಿಕೆ  

ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


ನೀನೆನ್ನ ದೃಷ್ಟಿಗೆ ಅಮೂಲ್ಯನು, ಘನವಂತನು, ಅತಿಪ್ರಿಯನು. ಎಂದೇ ನಿನ್ನ ಪ್ರಾಣರಕ್ಷಣೆಗಾಗಿ ತ್ಯಜಿಸುವೆನು ಜನರನ್ನೂ ಜನಾಂಗಗಳನ್ನೂ.


ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಆಗ ನಿನ್ನ ಪರಿವಾರದವರಾದ ಇವರೆಲ್ಲರು ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀವೂ ನಿಮ್ಮ ಅಧೀನದಲ್ಲಿರುವ ಜನರೆಲ್ಲರು ನಮ್ಮನ್ನು ಬಿಟ್ಟು ಹೋಗಿಬಿಡಿ - ಎಂದು ಬೇಡುವರು. ಇದಾದ ಮೇಲೆ ನಾನು ಹೊರಟುಹೋಗುವೆನು.’ ಈ ಮಾತುಗಳನ್ನು ಹೇಳಿ ಮೋಶೆ ಕೋಪದಿಂದ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ನಿನ್ನ ಮನೆಯಲ್ಲಿ ಅಳಿದು ಉಳಿದವರು ಬಂದು ಅವನ ಮುಂದೆ ಅಡ್ಡಬೀಳುವರು; ‘ನಮಗೊಂದು ಬೆಳ್ಳಿಕಾಸನ್ನಾದರೂ ರೊಟ್ಟಿ ಚೂರನ್ನಾದರೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವುದಕ್ಕಾದರು ನಮ್ಮನ್ನು ಸೇರಿಸಿಕೋ’ ಎಂದು ಬೇಡಿಕೊಳ್ಳುವರು".


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು