Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:11 - ಕನ್ನಡ ಸತ್ಯವೇದವು C.L. Bible (BSI)

11 ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕರ್ತನೇ, ನಮ್ಮ ದೇವರೇ, ನೀನು ಪ್ರಭಾವ ಮಾನ ಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಸಮಸ್ತವನ್ನು ಸೃಷ್ಟಿಸಿದಾತನು ನೀನೇ; ಎಲ್ಲವು ನಿನ್ನ ಚಿತ್ತದಿಂದಲೇ ಇದ್ದವು, ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಮ್ಮ ಪ್ರಭುವೇ, ನಮ್ಮ ದೇವರೇ! ನೀನು ಪ್ರಭಾವ, ಗೌರವ, ಅಧಿಕಾರಗಳನ್ನು ಪಡೆಯಲು ಯೋಗ್ಯನಾಗಿರುವೆ. ಎಲ್ಲವನ್ನೂ ನಿರ್ಮಿಸಿದಾತನು ನೀನೇ. ನಿನ್ನ ಚಿತ್ತದಂತೆಯೇ ಎಲ್ಲವೂ ಇದ್ದವು; ಎಲ್ಲವೂ ಸೃಷ್ಟಿಗೊಂಡವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನಮ್ಮ ಕರ್ತ ಆಗಿರುವ ದೇವರೇ, ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ. ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು, ನಿಮ್ಮ ಚಿತ್ತದಿಂದಲೇ ಇದ್ದವು,” ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 “ಅಮ್ಚ್ಯಾ ಸರ್ವೆಸ್ವರಾ ಅನಿ ಅಮ್ಚ್ಯಾ ದೆವಾ! ಮಾನ್, ಮಹಿಮಾ, ಅನಿ ಪದ್ವಿ ಸಗ್ಳಿ ತುಜಿಚ್ ಹೊವ್ಕ್ ಪಾಜೆ. ತಿಯಾಚ್ ಸಗ್ಳೆ ರಚ್ಲೆಯ್, ಅನಿ ತಿಯಾ ಮನ್ ಕರಲ್ಲ್ಯಾಸಾಟಿ ಸಗ್ಳೆ ರಚನ್ ಹೊಲಾ ಅನಿ ತೆಕಾ ಜಿವ್ ಹಾಯ್”. ಮನುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:11
31 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಉಚ್ಚಕಂಠದಿಂದ : “ವಧಿತ ಕುರಿಮರಿಯಾದಾತನು ಶಕ್ತಿಯನು, ಸಿರಿತನವನು ಗೌರವವನು, ಘನಮಾನವನು ಸ್ತುತಿಯನು, ಸುಜ್ಞಾನವನು ಹೊಂದಲು ಯೋಗ್ಯನು,” ಎಂದು ಹಾಡಿದರು.


ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.


ಸರ್ವೇಶ್ವರ ಒಂದೊಂದನ್ನೂ ಸೃಷ್ಟಿಸಿರುವುದು ಒಂದು ಗುರಿಯಿಟ್ಟೇ ಹೌದು; ಕೆಡುಕರನ್ನು ಉಂಟುಮಾಡಿರುವುದು ಕೇಡಿನ ದಿನಕ್ಕಾಗಿಯೇ.


ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ;


ಆತನು ಮಹಾಶಬ್ದದಿಂದ, “ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ; ಅವರಿಗೆ ಸ್ತುತಿಸ್ತೋತ್ರ ಸಲ್ಲಿಸಿರಿ. ಏಕೆಂದರೆ, ಅವರು ತೀರ್ಪುಕೊಡುವ ಗಳಿಗೆಯು ಬಂದಿದೆ. ಆದ್ದರಿಂದ ಭೂಸ್ವರ್ಗಗಳನ್ನೂ ಕಡಲುಕಾರಂಜಿಗಳನ್ನೂ ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸಿರಿ,” ಎಂದು ಹೇಳಿದನು.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಇದಲ್ಲದೆ, “ಸರ್ವೇಶ್ವರಾ, ಆದಿಯಲ್ಲಿ ನೀ ಭೂಮಿಯನು ಸೃಜಿಸಿದೆ ನಭಮಂಡಲದಲ್ಲಿ ನಿನ್ನ ಕೈಚಳಕವ ತೋರಿದೆ.


ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.


ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.


ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಪ್ರಭು ಸ್ತುತ್ಯಾರ್ಹನು I ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು II


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ.


ಸರ್ವೇಶ್ವರನು ಸ್ತುತ್ಯಾರ್ಹನು ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು


ಬಲಿಷ್ಠ ದೇವದೂತನೊಬ್ಬನು ಮಹಾಶಬ್ದದಿಂದ, “ಈ ಮುದ್ರೆಗಳನ್ನು ಒಡೆದು ಸುರುಳಿಯನ್ನು ಬಿಚ್ಚಲು ಯೋಗ್ಯನು ಯಾರು?” ಎಂದು ಪ್ರಕಟಿಸಿದನು.


ನನ್ನ ಸೃಷ್ಟಿಕರ್ತನು ಸತ್ಯಸ್ವರೂಪನೆಂದು ತೋರಲು ನನ್ನ ವಾದಗಳನ್ನು ಸವಿಸ್ತಾರಗೊಳಿಸುವೆನು:


ಸಾರಿರಿ ದೇವರಾ ಶಕ್ತಿಸಾಮರ್ಥ್ಯವನು I ಇಸ್ರಯೇಲಿಗೆ ತೋರಿದಾ ಪ್ರಭಾವವನು I ಗಗನವನು ಆವರಿಸಿರುವಾ ಪ್ರತಿಭೆಯನು II


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


“ಭೂಮ್ಯಾಕಾಶಗಳನ್ನು ಸೃಷ್ಟಿಸದ ದೇವರುಗಳು ಭೂಮಿಯ ಮೇಲಿಂದಲೂ ಆಕಾಶದ ಕೆಳಗಿನಿಂದಲೂ ಅಳಿದುಹೋಗುವುವು” ಎಂದು ನೀವು ಆ ಜನಾಂಗಗಳಿಗೆ ತಿಳಿಸಿರಿ.


ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು