Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:2 - ಕನ್ನಡ ಸತ್ಯವೇದವು C.L. Bible (BSI)

2 ಕೂಡಲೇ, ನಾನು ದೇವರಾತ್ಮವಶನಾದೆ. ಆಗ ಸ್ವರ್ಗದಲ್ಲಿ ಒಂದು ಸಿಂಹಾಸನ ಇರುವುದನ್ನೂ ಅದರಲ್ಲಿ ಒಬ್ಬರು ಆಸೀನರಾಗಿರುವುದನ್ನೂ ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೂಡಲೆ ನಾನು ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬನು ಕೂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೂಡಲೇ ನಾನು ಪವಿತ್ರಾತ್ಮನ ವಶನಾದೆನು. ಪರಲೋಕದಲ್ಲಿ ನನ್ನೆದುರಿಗೆ ಒಂದು ಸಿಂಹಾಸನವಿತ್ತು. ಯಾರೋ ಒಬ್ಬನು ಆ ಸಿಂಹಾಸನದ ಮೇಲೆ ಕುಳಿತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕೂಡಲೇ ನಾನು ಆತ್ಮವಶನಾದೆನು. ಆಗ ನನ್ನೆದುರಿನಲ್ಲಿ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬರು ಕುಳಿತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ತಾಬೊಡ್ತೊಬ್ ಆತ್ಮೊಚ್ ಮಾಕಾ ಚಾಲ್ವುನ್ ನ್ಹೆವ್ಕ್‌ಲಾಗ್ಲೊ. ಥೈ ಸರ್‍ಗಾ ವರ್ತಿ ಎಕ್ ಸಿವಾಸನ್ ಹೊತ್ತೆ, ತ್ಯೆಚ್ಯಾ ವರ್ತಿ ಕೊನ್‍ ಕಿ ಎಕ್ಲೊ ಬಸಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:2
28 ತಿಳಿವುಗಳ ಹೋಲಿಕೆ  

ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.


ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.


ನಾನು ಈ ದೃಶ್ಯವನ್ನು ಸಹ ಕಂಡೆ : ಸಿಂಹಾಸನದಲ್ಲಿ ಆಸೀನರಾಗಿರುವವರ ಬಲಗೈಯಲ್ಲಿ ಒಂದು ಸುರುಳಿ ಇತ್ತು. ಅದರ ಒಳಭಾಗದಲ್ಲೂ ಹೊರಭಾಗದಲ್ಲೂ ಬರೆಯಲಾಗಿತ್ತು. ಅದನ್ನು ಏಳು ಮುದ್ರೆಗಳಿಂದ ಮುದ್ರಿಸಲಾಗಿತ್ತು.


ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.


ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು.


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ : “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.”


ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;


ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಆಗ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ನಾಲ್ಕು ಜೀವಿಗಳೂ ಸಿಂಹಾಸನಾರೂಢರಾದ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. “ಆಮೆನ್, ಅಲ್ಲೆಲೂಯ,” ಎಂದರು.


ಸಿಂಹಾಸನಾರೂಢನಾಗಿದ್ದವನು ಆಗ, “ಇಗೋ, ನಾನೆಲ್ಲವನ್ನೂ ಹೊಸದಾಗಿಸುತ್ತೇನೆ,” ಎಂದನು. ಅಲ್ಲದೆ ಅವನು, “ಇದನ್ನು ನೀನು ಬರೆ, ಈ ಮಾತುಗಳು ಸತ್ಯವಾದುವು ಹಾಗೂ ವಿಶ್ವಾಸಾರ್ಹವಾದುವು,” ಎಂದು ಹೇಳಿದನು.


ನಾನು ದೇವರಾತ್ಮ ವಶನಾದೆ. ಆಗ ದೇವದೂತನು ನನ್ನನ್ನು ಅಡವಿಗೆ ಕೊಂಡೊಯ್ದನು. ಅಲ್ಲಿ, ಒಂದು ಕಡುಗೆಂಪಾದ ಮೃಗದ ಮೇಲೆ ಕುಳಿತಿದ್ದ ಸ್ತ್ರೀಯೊಬ್ಬಳನ್ನು ಕಂಡೆ. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಮಾತುಗಳೇ ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.


ಸರ್ವಜನಾಂಗಗಳನ್ನು ಕಬ್ಬಿಣದ ದಂಡದಿಂದ ಆಳಬಲ್ಲಂಥ ಒಂದು ಗಂಡುಮಗುವಿಗೆ ಆಕೆ ಜನ್ಮವಿತ್ತಳು. ಆದರೆ, ಆ ಮಗುವನ್ನು ಸಿಂಹಾಸನದಲ್ಲಿದ್ದ ದೇವರ ಬಳಿಗೆ ಕೊಂಡೊಯ್ಯಲಾಯಿತು.


ಅವರು ಆ ಬೆಟ್ಟಗಳನ್ನೂ ಬಂಡೆಗಳನ್ನೂ ಉದ್ದೇಶಿಸಿ, “ನಮ್ಮ ಮೇಲೆ ಬೀಳಿ; ಸಿಂಹಾಸನದಲ್ಲಿ ಆಸೀನರಾಗಿರುವವರ ಸಮ್ಮುಖದಿಂದಲೂ ಯಜ್ಞದ ಕುರಿಮರಿಯಾದಾತನ ಕೋಪಾಗ್ನಿಯಿಂದಲೂ ನಮ್ಮನ್ನು ಮರೆಮಾಡಿ;


ಆದಿಯಿಂದಲೂ ಉನ್ನತಸ್ಥಾನದಲ್ಲಿದೆ ನಮ್ಮ ಪವಿತ್ರಾಲಯ ಅದು ಮಹಿಮೆಯ ಸಿಂಹಾಸನ.


ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II


ಆಗ ಯೇಸು, “ಹಾಗಾದರೆ, ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಆತನನ್ನು ‘ಪ್ರಭು’ ಎಂದು ಕರೆದಿದ್ದಾನಲ್ಲಾ. ಅದು ಹೇಗೆ?


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು